
ಮಳವಳ್ಳಿ (ಮಂಡ್ಯ ಜಿಲ್ಲೆ): ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಸಮೀಪ ಗುರುವಾರ ಚಲಿಸುತ್ತಿದ್ದ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು, ಆಶ್ಚರ್ಯಕರ ರೀತಿಯಲ್ಲಿ ಬೈಕ್‌ನಲ್ಲಿದ್ದವರು ಪಾರಾಗಿದ್ದಾರೆ.
ತಾಲ್ಲೂಕಿನ ಹಾಡ್ಲಿ ಸರ್ಕಲ್‌ನ ಸುದೀಪ್ ಬೈಕ್‌ನಲ್ಲಿ ಯುವತಿಯ ಜೊತೆ ಹಾಡ್ಲಿ ಸರ್ಕಲ್‌ನಿಂದ ಮಳವಳ್ಳಿಗೆ ಬರುತ್ತಿದ್ದ ವೇಳೆ ಡಾ.ಬಿ.ಆರ್. ಅಂಬೇಡ್ಕರ್ ಭವನ ಹಾಗೂ ತಾಲ್ಲೂಕು ಕ್ರೀಡಾಂಗಣದ ಬಳಿ ಏಕಾಏಕಿ ಬೈಕಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ.
ಕೂಡಲೇ ಹೊಗೆ ಗಮನಿಸಿದ ಸವಾರ ಸುದೀಪ್, ಬೈಕ್ ನಿಲ್ಲಿಸಿ ಯುವತಿಯೊಂದಿಗೆ ದೂರ ಸರಿದು ಪಾರಾಗಿದ್ದಾರೆ.
ಬೈಕ್‌ಗೆ ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಂಕಿಯನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿಯನ್ನು ನಂದಿಸಿದರು. ಈ ಸಂಬಂಧ ಪಟ್ಟಣದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.