ADVERTISEMENT

Muda Scam: ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 13:41 IST
Last Updated 17 ಆಗಸ್ಟ್ 2024, 13:41 IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆದೇಶ ಹೊರಡಿಸಿರುವ ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ವಿವಿಧ ಸಂಘನೆಯ ಮುಖಂಡರು ಮಂಡ್ಯ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಪ್ರತಿಭಟನಾಕಾರರನ್ನು ಕುರಿತು ಮಾತನಾಡಿದರು 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆದೇಶ ಹೊರಡಿಸಿರುವ ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ವಿವಿಧ ಸಂಘನೆಯ ಮುಖಂಡರು ಮಂಡ್ಯ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಪ್ರತಿಭಟನಾಕಾರರನ್ನು ಕುರಿತು ಮಾತನಾಡಿದರು    

ಮಂಡ್ಯ: ‘ಪ್ರಜಾಪ್ರಭುತ್ವ ಕಗ್ಗೊಲೆ ಮಾಡುವ ನಡೆಯನ್ನು ರಾಜ್ಯಪಾಲರು ಅನುಸರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ’ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ವಿವಿಧ ಸಂಘನೆಯ ಮುಖಂಡರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಸರ್‌ಎಂ.ವಿ. ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ರಾಜ್ಯಪಾಲರು, ಮೈತ್ರಿ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳಂಕರಹಿತರಾದ ಸಿದ್ದರಾಮಯ್ಯ ಅವರ ಮೇಲೆ ಮಾಡಿರುವ ಮೈತ್ರಿ ಪಕ್ಷಗಳ ಆರೋಪಗಳನ್ನು ಜನತೆ ಒಪ್ಪುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದವರು ಪ್ರಾಮಾಣಿಕರಾ? ನಿರಾಣಿ, ಎಚ್‌ಡಿಕೆ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಏಕೆ ಆದೇಶ ನೀಡಿಲ್ಲ? ಎಂದು ಪ್ರಶ್ನೆ ಮಾಡಿದರು.

ADVERTISEMENT

ಶಾಸಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ‘ಚುನಾಯಿತ ಸರ್ಕಾರವನ್ನು ಹೇಗಾದರೂ ಮಾಡಿ ಬೀಳಿಸಬೇಕು ಎಂಬುವ ನಿಟ್ಟಿನಲ್ಲಿ ಈ ಮೈತ್ರಿ ಪಕ್ಷಗಳು ಹಠತೊಟ್ಟು ನಿಂತಿವೆ. ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯವಾದುದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರೇ ನೀವು ಮೈಸೂರಿನ 50:50 ಅನುಪಾತವನ್ನು ಮುಡಾ ಹಗರಣವೆಂದು ನೀವು ಒಪ್ಪಿಕೊಳ್ಳುವುದಾದರೆ ಎಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ ಹಾಗೂ ಬಸವರಾಜು ಬೊಮ್ಮಾಯಿ ಅವರ ಮೇಲೆ ಮೊದಲು ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡಬೇಕು. ಅಂದಿನ ಸರ್ಕಾರ ಬಿಜೆಪಿ ಇತ್ತು, ಅದನ್ನು ಮರೆತು ಈಗ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸುವ ಪಿತೂರಿಯನ್ನು ಯಾರೂ ಒಪ್ಪುವುದಿಲ್ಲ ಎಂದು ಕಿಡಿಕಾರಿದರು.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಎಲ್‌.ಸಂದೇಶ್‌ ಮಾತನಾಡಿದರು. ಮೈಷುಗರ್‌ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಖಂಡರಾದ ಎಂ.ಎಸ್‌.ಚಿದಂಬರ್‌, ಸುರೇಶ್‌, ಸಿ.ಎಂ.ದ್ಯಾವಪ್ಪ, ನಾಗರಾಜು, ಶ್ರೀಧರ್, ಶಿವಪ್ರಕಾಶ್, ವಿಜಯಲಕ್ಷ್ಮಿ ರಘುನಂದನ್, ಮಂಜುನಾಥ್‌, ಅಮ್ಜದ್ ಪಾಷಾ, ಅಂಜನಾ ಶ್ರೀಕಾಂತ್, ರುದ್ರಪ್ಪ, ದೊಡ್ಡಯ್ಯ, ಸೋಮಣ್ಣ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.