ADVERTISEMENT

ಪಾಂಡವಪುರ: ಜ.10ರಂದು ಪುರಸಭೆ ಬಜೆಟ್ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2024, 14:22 IST
Last Updated 5 ಜನವರಿ 2024, 14:22 IST

ಪಾಂಡವಪುರ: ‘ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಮೂಲಸೌಲಭ್ಯ ಒದಗಿಸಲು ಹಾಗೂ ಪಟ್ಟಣದ ಸಮಗ್ರ ಅಭಿವೃದ್ದಿ ಸಲುವಾಗಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಜ.10ರಂದು ಬಜೆಟ್ ಪೂರ್ವಭಾವಿ ಸಭೆ ಕರೆಯಲಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ವೀಣಾ ತಿಳಿಸಿದ್ದಾರೆ.

ಸಂಪನ್ಮೂಲ ಕ್ರೋಢೀಕರಣ ಹಂಚಿಕೆ ಮಾಡುವ ಜತೆಗೆ 2024–25ನೇ ಸಾಲಿನ ಆಯವ್ಯಯ ಅಂದಾಜು ತಯಾರಿಸಬೇಕಾಗಿದ್ದು, ಈ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ಸ್ವೀಕರಿಸಲು ಅಂದು ಬೆಳಿಗ್ಗೆ 10.30ಕ್ಕೆ ಪುರಸಭೆ ಕಚೇರಿ ಸಭಾಂಗಣದಲ್ಲಿ ಎಲ್ಲರ ಸಮ್ಮುಖದಲ್ಲಿ ಬಜೆಟ್ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಎಲ್ಲರೂ ಸಭೆಗೆ ಹಾಜರಾಗಬೇಕೆಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT