ಶ್ರೀರಂಗಪಟ್ಟಣ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ ಆರೋಪಿಗೆ ಪಟ್ಟಣದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿದೆ.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಡವಪುರ ತಾಲ್ಲೂಕು ಅರಳಕುಪ್ಪೆ ಗ್ರಾಮದ ನಾಗರಾಜು ಅವರ ಮಗ ವಿವೇಕಾನಂದ ಶಿಕ್ಷೆಗೆ ಗುರಿಯಾಗಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿ ಗ್ರಾಮದ ದಿವ್ಯರಾಣಿ ಅವರನ್ನು ವಿವೇಕಾನಂದ ಅವರನ್ನು 2010ರಲ್ಲಿ ವಿವಾಹವಾಗಿದ್ದು, ಮೇಲಿಂದ ಮೇಲೆ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು. 2015ರ ಅ.14ರಂದು ಕೊಲೆ ಮಾಡಿದ್ದರು.
ಪ್ರಕರಣ ಕುರಿತು ಗ್ರಾಮಾಂತರ ಪೊಲೀಸ್ ಠಾಣೆ ಡಿವೈಎಸ್ಪಿ ಸಿದ್ದೇಶ್ವರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೋಪಾಲಕೃಷ್ಣ ರೈ. ಟಿ ಅವರು ಜ.22ರಂದು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಎಂ.ಕೆ. ಪ್ರಫುಲ್ಲ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.