ಹಲಗೂರು (ಮಂಡ್ಯ ಜಿಲ್ಲೆ): ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಗೆ ಬರುವ ಪ್ರವಾಸಿಗರಿಗೆ ಪ್ರವೇಶ ನೀಷೇಧಿಸಿ ಮಳವಳ್ಳಿ ತಹಶೀಲ್ದಾರ್ ಎಸ್.ವಿ. ಲೋಕೇಶ್ ಆದೇಶ ಹೊರಡಿಸಿದ್ದಾರೆ.
ಸಮೀಪದ ಮುತ್ತತ್ತಿ ಗ್ರಾಮವು ಪುರಾಣ ಪ್ರಸಿದ್ಧ ಯಾತ್ರಾಸ್ಥಳ ಹಾಗೂ ಪ್ರೇಕ್ಷಣೀಯ ಸ್ಥಳವಾಗಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಕಾವೇರಿ ನದಿಯಲ್ಲಿ ಈಜಲು ಇಳಿಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಕಾವೇರಿ ನದಿ ಪಾತ್ರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ತಡೆಯಲು, ವನ್ಯಜೀವಿ ಸಂರಕ್ಷಣೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡುವಂತೆ ಹಲಗೂರು ಪಿಎಸ್ಐ ಲೋಕೇಶ ಮನವಿ ಮಾಡಿದ್ದರು.
ಇದನ್ನು ಪರಿಗಣಿಸಿ ಜು.28ರಂದು ಸಂಜೆ ಆರು ಗಂಟೆಯಿಂದ ಮುಂದಿನ ಆದೇಶದವರೆಗೆ ಪ್ರವಾಸಿ ತಾಣ ಮುತ್ತತ್ತಿ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಿ, ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಸ್.ವಿ.ಲೋಕೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.