
ನಾಗಮಂಗಲ: ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭಾನುವಾರ ಬೆಳಿಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕಾಲಭೈರವೇಶ್ವರ ಸ್ವಾಮಿ ದೇವಾಲಯ, ಕ್ಷೇತ್ರಾಧಿ ದೇವತೆಗಳ ದೇವಾಲಯಗಳಲ್ಲಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿದರು. ಸ್ವಾಮೀಜಿ ಆಶೀರ್ವಾದ ಪಡೆದರು. ಮುಖಂಡರೊಂದಿಗೆ ಪ್ರಸಾದ ಸ್ವೀಕರಿಸಿದರು. ಎಚ್‌ಡಿಕೆ ಅವರನ್ನು ಗೌರವಿಸಲಾಯಿತು.
ಕುಮಾರಸ್ವಾಮಿ ಅವರ ಭೇಟಿಯ ವಿಷಯ ತಿಳಿದು ಸ್ಥಳಕ್ಕೆ ಬಂದಿದ್ದ ನೂರಾರು ಕಾರ್ಯಕರ್ತರನ್ನು ಮಾತನಾಡಿಸಿ , ತೆರಳಿದರು. ಮುಖಂಡರಾದ ಸುರೇಶ್ ಗೌಡ, ರಾಮಚಂದ್ರ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು ಮತ್ತು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.