ಸಾವು (ಪ್ರಾತಿನಿಧಿಕ ಚಿತ್ರ)
ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ದೊಂದೇಮಾದಹಳ್ಳಿಯ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನ ಕಾರ್ಮಿಕರ ಮನೆಯಲ್ಲಿ ಇಟ್ಟಿದ್ದ ಪಿಸ್ತೂಲ್ ಅನ್ನು ತೆಗೆದುಕೊಂಡು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಕೋಳಿ ಫಾರಂನಲ್ಲಿ ಕೆಲಸಕ್ಕಾಗಿ ಪಶ್ಚಿಮ ಬಂಗಾಳದಿಂದ ವಲಸೆ ಬಂದಿದ್ದ ಶಶಾಂಕ್ ಎಂಬುವರ ಮಗ ಅಭಿಜಿತ್ (4) ಮೃತ ಬಾಲಕ. ಅಭಿಜಿತ್ ಹಾಗೂ ಮತ್ತೊಬ್ಬ ಬಾಲಕ ಭಾನುವಾರ ಸಂಜೆ ಕಾರ್ಮಿಕರ ಮನೆಯಲ್ಲಿಟ್ಟಿದ್ದ ಪಿಸ್ತೂಲ್ ಅನ್ನು ಯಾರ ಗಮನಕ್ಕೂ ಬರದಂತೆ ತೆಗೆದುಕೊಂಡು ಆಟವಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಚಲುವರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.