ADVERTISEMENT

ಮಂಡ್ಯ | ಸರ್ಕಾರಿ ಭೂಮಿ ಅಕ್ರಮ ಮಂಜೂರಾತಿ: ಎಸ್‌ಡಿಎ ಬಂಧನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 5:30 IST
Last Updated 19 ಜನವರಿ 2026, 5:30 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಮಂಡ್ಯ: ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳನ್ನು ತಿದ್ದಿ ಮತ್ತು ಸೃಷ್ಟಿಸಿ, ಅಕ್ರಮವಾಗಿ ಸರ್ಕಾರಿ ಭೂಮಿ ಮಂಜೂರಾತಿ ಮಾಡಿದ್ದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್‌ (ಎ–9) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. 

ADVERTISEMENT

ತನಿಖಾಧಿಕಾರಿ ಡಿವೈಎಸ್ಪಿ ಚಲುವರಾಜು ನೇತೃತ್ವದ ತಂಡ ವಿಜಯಕುಮಾರ್‌ ಅವರನ್ನು ಚಾಮರಾಜನಗರ ಬಳಿ ಬಂಧಿಸಿದೆ. ನಾಗಮಂಗಲದ ಜೆಎಂಎಫ್‌ಸಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ಪ್ರಕರಣದಲ್ಲಿ ಈಗಾಗಲೇ ಇಬ್ಬರು ಶಿರಸ್ತೇದಾರರು ಸೇರಿ ಒಟ್ಟು 5 ಸರ್ಕಾರಿ ನೌಕರರನ್ನು ಬಂಧಿಸಲಾಗಿತ್ತು. ಈಗ ಬಂಧಿತರ ಸಂಖ್ಯೆ 6ಕ್ಕೇ ಏರಿದೆ. ತಲೆಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. 

ಹೆಚ್ಚಿನ ಮಾಹಿತಿ ಕಲೆ ಹಾಕಲು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ಜ.19ರಂದು ನ್ಯಾಯಾಧೀಶರನ್ನು ಕೇಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.