ಬಂಧನ
(ಪ್ರಾತಿನಿಧಿಕ ಚಿತ್ರ)
ನಾಗಮಂಗಲ: ತಾಲ್ಲೂಕು ಕಚೇರಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ನ್ಯಾಯಾಂಗ ಬಂಧನದಲ್ಲಿದ್ದ 6 ಮಂದಿ ಆರೋಪಿಗಳನ್ನು ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಚಲುವರಾಜು ನೇತೃತ್ವದ ತಂಡ ನಾಲ್ಕು ದಿನಗಳ ಪೊಲೀಸ್ ವಶಕ್ಕೆ ಪಡೆದಿದೆ.
ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.
ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಕೆ ಪ್ರಕರಣವನ್ನು ತನಿಖೆ ನಡೆಸಲು ಜಿಲ್ಲಾಡಳಿತ ನಾಗಮಂಗಲ ಉಪ ವಿಭಾಗದ ಡಿವೈಎಸ್ಪಿ ಚಲುವರಾಜು ನೇತೃತ್ವದಲ್ಲಿ ತಂಡ ರಚಿಸಿತ್ತು.
ತನಿಖಾಧಿಕಾರಿ ಚಲುವರಾಜು, ಪಟ್ಟಣ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರು ಖುದ್ದು ಕಡತಗಳನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಿದ್ದರು. ಮಂಗಳವಾರ ನ್ಯಾಯಾಧೀಶರ ಅನುಮತಿ ಪಡೆದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ವಶಕ್ಕೆ ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.