ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಸೆ.11ರಂದು ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ 55 ಆರೋಪಿಗಳಿಗೂ ಮಂಡ್ಯದ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37 ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
"ಆರೋಪಿಗಳು ಇನ್ನೂ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದು, ₹1 ಲಕ್ಷ ಮೌಲ್ಯದ ಬಾಂಡ್ ಹಾಗೂ 'ಡಬಲ್ ಶ್ಯೂರಿಟಿ' ನೀಡಿದ ನಂತರ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.