ನಾಗಮಂಗಲ ಗಲಭೆಯಲ್ಲಿ ಸುಟ್ಟು ಕರಕಲಾಗಿರುವ ಅಂಗಡಿ
ಪ್ರಜಾವಾಣಿ ಚಿತ್ರ
ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಈಚೆಗೆ ನಡೆದ ಗಲಭೆಯಲ್ಲಿ ಒಟ್ಟು 26 ಅಂಗಡಿಗಳಿಗೆ ಹಾನಿಯಾಗಿದ್ದು, ಒಟ್ಟು ₹2.66 ಕೋಟಿ ನಷ್ಟವಾಗಿದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.
‘ಗಲಭೆಯಿಂದ ಆದ ನಷ್ಟದ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು, ನಷ್ಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಕುಮಾರ ಮಾಹಿತಿ ನೀಡಿದರು.
ಪೊಲೀಸ್ ಇಲಾಖೆಯ ಪ್ರಕಾರ, ₹4.5 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 26 ಎಫ್‌ಐಆರ್ ದಾಖಲಾಗಿದ್ದು, ಒಟ್ಟು 55 ಆರೋಪಿಗಳನ್ನು ಬಂಧಿಸಲಾಗಿದೆ. ಗಲಭೆಯಲ್ಲಿ ಭಾಗಿಯಾದ ಇನ್ನೂ 120 ಮಂದಿಯನ್ನು ಗುರುತಿಸಿದ್ದು, ವಿಚಾರಣೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.