ADVERTISEMENT

ನಾಗಮಂಗಲ | 'ವಿದ್ಯಾರ್ಥಿಗಳಿಗೂ ಸಾಮಾಜಿಕ ಮೌಲ್ಯ ಕಲಿಸಿ'

ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 6:29 IST
Last Updated 10 ಸೆಪ್ಟೆಂಬರ್ 2025, 6:29 IST
ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು
ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು   

ನಾಗಮಂಗಲ: ವಿದ್ಯಾರ್ಥಿಗಳಿಗೆ ಸಾಮಾಜಿಕ ಜ್ಞಾನ ಕಲಿಸುವ ಜವಾಬ್ದಾರಿ ಶಿಕ್ಷಕರು ಹೊರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಪಠ್ಯದ ಜೊತೆಗೆ ಸಮಾಜದ ಜ್ಞಾನ ಕಲಿಸುವ ಕೆಲಸವಾದಾಗ ಮಾತ್ರ ಸ್ವಸ್ಥ ಸಮಾಜ ಕಟ್ಟಲು ಸಾಧ್ಯ. ಸೌಹಾರ್ದಯುತವಾದ ವಿಚಾರಗಳನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ತುಂಬುವ ಕೆಲಸ ಆಗಬೇಕು ಎಂದು ತಿಳಿಸಿದರು.

ADVERTISEMENT

‘ಜ್ಞಾನ ಕಲಿಸಿದರೆ ದೊಡ್ಡ ಅಪರಾಧವೆಂಬಂತೆ ಕೆಲವು ಶಿಕ್ಷಕರ ಮನಸ್ಥಿತಿಯಿದ್ದು, ಇದನ್ನು ಬಿಡಬೇಕು. ಕೇವಲ ಪಠ್ಯವನ್ನಷ್ಟೆ ಬೋಧಿಸುವುದು ನಮ್ಮ ಕರ್ತವ್ಯ ಎಂದು ಭಾವಿಸಬಾರದು. ಶಾಲೆಯ ಸಮಯ ಮುಗಿದ ನಂತರ ಪ್ರತಿನಿತ್ಯ ದೇಶ ಹಾಗೂ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವುದು ಮುಖ್ಯವಾಗಬೇಕು’ ಎಂದರು.

ಶಿಕ್ಷಕರೆ ಮಕ್ಕಳನ್ನು ಎಲ್ಲಾ ರೀತಿ ಸರಿ ಮಾಡಲು ಸಾಧ್ಯವಿಲ್ಲ. ಶಿಕ್ಷಕರಷ್ಟೇ ಪ್ರಮಾಣದ ಜವಾಬ್ದಾರಿ ಪೋಷಕರ ಮೇಲಿದೆ ಎನ್ನುವುದನ್ನು ಮರೆಯುವಂತಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಅರ್ಥೈಸಿಕೊಂಡು ನಡೆಯಬೇ ಎಂದು ಸಲಹೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.

ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷೆ ವಸಂತಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ, ಡಿವೈಎಸ್‌ಪಿ ಚಲುವರಾಜು, ತಹಶೀಲ್ದಾರ್‌ ಆದರ್ಶ್, ತಾ.ಪಂ.ಇಒ ಸತೀಶ್, ಬಿಇಒ ರವೀಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಜೆ.ವೈ.ಮಂಜುನಾಥ್ ಭಾಗವಹಿಸಿದ್ದರು.

ಸ್ವಸ್ಥ ಸಮಾಜ ಕಟ್ಟಲು ಸಹಕರಿಸಿ ಪಠ್ಯ ಬೋಧನೆಗಷ್ಟೇ ಶಿಕ್ಷಕರು ಮೀಸಲಾಗದಿರಿ ಪೋಷಕರಿಗೂ ಶಿಕ್ಷಕರಷ್ಟೇ ಜವಾಬ್ದಾರಿ ಇದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.