
ಪಾಂಡವಪುರ: ಒತ್ತಡ, ಹಣ, ಆಮಿಷಕ್ಕೆ ಮಣಿದು ಮತ ಮಾರಾಟ ಮಾಡಿಕೊಳ್ಳದೇ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾನ ಮಾಡಬೇಕಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶೆ ಬಿ.ಪಾರ್ವತಮ್ಮ ಹೇಳಿದರು.
ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ತಾಲ್ಲೂಕು ಆಡಳಿತ, ವಕೀಲರ ಸಂಘ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಅಭಿಯೋಜನಾ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಆಶ್ರಯದಲ್ಲಿ ಈಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಫಾಟಿಸಿ ಮಾತನಾಡಿದರು.
ರಾಷ್ಟ್ರೀಯ ಮತದಾರರ ದಿನವು ಪ್ರಜಾಪ್ರಭುತ್ವವನ್ನು ಬಲಪಡಿಸುವುದಾಗಿದೆ. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು.
ತಹಶೀಲ್ದಾರ್ ಬಸವರಡ್ಡೆಪ್ಪ, ಬಿಇಒ ಧರ್ಮಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಸಹಾಯಕ ಸರ್ಕಾರಿ ಅಭಿಯೋಜಕ ಶಿವನಂಜಯ್ಯ, ವಕೀಲರ ಸಂಘದ ಅಧ್ಯಕ್ಷ ಗಂಗರಾಜು, ಕಾರ್ಯದರ್ಶಿ ಕೆ.ಎಸ್.ಮೋಹನ್ ಕುಮಾರ್ ಇರು.
ಉತ್ತಮವಾಗಿ ಕಾರ್ಯನಿರ್ವಹಿಸಿದ ಬೂತ್ ಮಟ್ಟದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.