ADVERTISEMENT

ಆಮಿಷಕ್ಕೆ ಒಳಗಾಗದೆ ಮತದಾನ ಮಾಡಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿಕುಮಾರಿ ಸಲಹೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 5:48 IST
Last Updated 26 ಜನವರಿ 2023, 5:48 IST
ಮಂಡ್ಯ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿಕುಮಾರಿ ಅವರು ಉದ್ಘಾಟಿಸಿದರು. ಡಾ.ಎಚ್.ಎನ್.ಗೋಪಾಲಕೃಷ್ಣ, ಶಾಂತಾ ಎಲ್‌.ಹುಲ್ಮನಿ, ಡಾ.ಎಚ್.ಎಲ್ ನಾಗರಾಜು, ಎನ್.ಯತೀಶ್ ಇದ್ದರು
ಮಂಡ್ಯ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿಕುಮಾರಿ ಅವರು ಉದ್ಘಾಟಿಸಿದರು. ಡಾ.ಎಚ್.ಎನ್.ಗೋಪಾಲಕೃಷ್ಣ, ಶಾಂತಾ ಎಲ್‌.ಹುಲ್ಮನಿ, ಡಾ.ಎಚ್.ಎಲ್ ನಾಗರಾಜು, ಎನ್.ಯತೀಶ್ ಇದ್ದರು   

ಮಂಡ್ಯ: ಮತ ಚಲಾಯಿಸುವವರು ಯಾವುದೇ ಆಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಅದರ ಮಹತ್ವ ಅರಿತುಕೊ ಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿಕುಮಾರಿ ಹೇಳಿದರು.

ನಗರದ ಕಲಾಮಂದಿರದಲ್ಲಿ ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಹಾಗೂ ಜಿಲ್ಲಾಡ ಳಿತದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯವಿಲ್ಲದೆ ಎಲ್ಲರಿಗೂ ಮತ ದಾನದ ಹಕ್ಕು ಕಲ್ಪಿಸಿದೆ. ಯಾವುದೇ ಆಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಬೇಕಿದೆ. ಪ್ರಸ್ತುತ ಯುವಕರಲ್ಲಿ ನಾವು ಏಕೆ ಮತದಾನ ಮಾಡಬೇಕು, ಮತದಾನ ಎನ್ನುವುದು ಎಷ್ಟು ಮುಖ್ಯ ಎನ್ನುವುದು ತಿಳಿಯದೆ ಇರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಮತದಾರರು ಜಾಗೃತರಾಗಬೇಕು. ಪ್ರತಿ ಮತದಾರರಿಗೆ ಮತದಾನದ ಹಕ್ಕು ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮತದಾನ ಮುಖ್ಯವಾಗಿದ್ದು, ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡ ಲು ಮತದಾನ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಮಂಡ್ಯ ದಲ್ಲಿ ನಡೆಯುವ ಚುನಾವಣೆಯಲ್ಲೂ ಶೇ 80 ರಿಂದ 85ರಷ್ಟು ಮತದಾನವಾ ಗುತ್ತಿದೆ. ಕಳೆದ ಒಂದು ವರ್ಷದಲ್ಲಿ 19ರಿಂದ 20 ಸಾವಿರ ಮಂದಿ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೆರಿಸಿದ್ದೇವೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕಾಲಾವಕಾಶವಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಜಿ.ಪಂ.ಸಿಇಒ ಶಾಂತ್ ಎಲ್.ಹುಲ್ಮನಿ ಅವರು ಮತದಾ ರರ ಪ್ರತಿಜ್ಞಾ ವಿಧಿ ಬೋಧಿಸಿದರು. 120 ವರ್ಷದ ರಾಧಾಬಾಯಿ ಹಾಗೂ ನಿಂಗಮ್ಮ ಅವರನ್ನು ಸನ್ಮಾನಿಸಿದರು. ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್, ಮಂಡ್ಯ ಉಪ ವಿಭಾಗಾಧಿಕಾರಿ ಎಸ್.ಎಚ್.ಕೀರ್ತನಾ, ತಹಶೀಲ್ದಾರ್‌ ಕುಂಞಿ ಅಹಮದ್, ನಗರಸಭೆ ಪೌರಯುಕ್ತ ಆರ್‌.ಮಂಜುನಾಥ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.