ADVERTISEMENT

Maddur Violence | ಸಿಎಂ, ಗೃಹಸಚಿವರು ಅಸಮರ್ಥರು: ನಿಖಿಲ್ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 13:03 IST
Last Updated 8 ಸೆಪ್ಟೆಂಬರ್ 2025, 13:03 IST
   

ಮದ್ದೂರು (ಮಂಡ್ಯ ಜಿಲ್ಲೆ): ‘ಶಾಂತಿಗೆ ಹೆಸರಾದ ಮಂಡ್ಯ ಜಿಲ್ಲೆಯಲ್ಲಿ ಅಶಾಂತಿ ತಲೆದೋರಿದ್ದು, ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಮುಖ್ಯಮಂತ್ರಿ, ಗೃಹಸಚಿವರು ಆಸಮರ್ಥರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

‘ಪೊಲೀಸರು ಸರ್ಕಾರ, ಗೃಹಸಚಿವರ ಒತ್ತಡಕ್ಕೆ ಹಾಗೂ ಸಮಾಜ ಘಾತುಕ ಶಕ್ತಿಗಳಿಗೆ ಮಣಿಯಬಾರದು. ಒಂದು ವೇಳೆ ಘಟನೆಗೆ ಕಾರಣರಾದವರನ್ನು ಬಂಧಿಸದಿದ್ದರೆ ನಾವು ಕೈಕಟ್ಟಿ ಕೂರುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ನಂತರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳ ಯೋಗಕ್ಷೇಮ ವಿಚಾರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.