ADVERTISEMENT

ನಿಮಿಷಾಂಬ ದೇಗುಲ: ಬೆಳಗಿನ ಪ್ರಸಾದ ವಿತರಣೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಮೇ 2025, 15:43 IST
Last Updated 7 ಮೇ 2025, 15:43 IST
<div class="paragraphs"><p>ಶ್ರೀರಂಗಪಟ್ಟಣ ಸಮೀಪದ ಗಂಜಾಂ ನಿಮಿಷಾಂಬ ದೇವಾಲಯದಲ್ಲಿ ಭಕ್ತರಿಗೆ ಪ್ರಸಾದ ವಿತರಿಸುವ ಕಾರ್ಯಕ್ಕೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್‌.ಎನ್‌. ದಯಾನಂದ್‌ ಬುಧವಾರ ಚಾಲನೆ ನೀಡಿದರು. </p></div>

ಶ್ರೀರಂಗಪಟ್ಟಣ ಸಮೀಪದ ಗಂಜಾಂ ನಿಮಿಷಾಂಬ ದೇವಾಲಯದಲ್ಲಿ ಭಕ್ತರಿಗೆ ಪ್ರಸಾದ ವಿತರಿಸುವ ಕಾರ್ಯಕ್ಕೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್‌.ಎನ್‌. ದಯಾನಂದ್‌ ಬುಧವಾರ ಚಾಲನೆ ನೀಡಿದರು.

   

ಶ್ರೀರಂಗಪಟ್ಟಣ: ಪಟ್ಟಣ ಸಮೀಪದ ಗಂಜಾಂ ನಿಮಿಷಾಂಬ ದೇವಾಲಯಕ್ಕೆ ಬರುವ ಭಕ್ತರಿಗೆ ಬೆಳಗಿನ ಸಮಯದಲ್ಲಿ ಪ್ರಸಾದ ವಿತರಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.

ದೇವಾಲಯ ಬಳಿಯ ದಾಸೋಹ ಭವನದಲ್ಲಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್‌.ಎನ್‌. ದಯಾನಂದ್‌ ಬುಧವಾರ ಪ್ರಸಾದ ವಿತರಣೆಗೆ ಚಾಲನೆ ನೀಡಿದರು. ವಾರದ ಎಲ್ಲಾ ದಿನಗಳೂ ಬೆಳಿಗ್ಗೆ 8ರಿಂದ 10ರವರೆಗೆ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ. ಪ್ರತಿ ದಿನ 300ರಿಂದ 400 ಜನರಿಗೆ ಬೆಳಗಿನ ಪ್ರಸಾದ ಸಿದ್ದಪಡಿಸಲಾಗುತ್ತದೆ. ಶುಕ್ರವಾರ ಮತ್ತು ಇತರ ವಿಶೇಷ ದಿನಗಳಲ್ಲಿ 500 ಜನರಿಗೆ ಪ್ರಸಾದ ಸಿದ್ದಪಡಿಸಲಾಗುವುದು’ ಎಂದು ಅವರು ತಿಳಿಸಿದರು.

ADVERTISEMENT

‘ಮಧ್ಯಾಹ್ನ 1ರಿಂದ 3ರವರೆಗೆ ಪ್ರಸಾದ ವಿತರಣೆ ಕಾರ್ಯ ಹಲವು ದಿನಗಳಿಂದ ನಡೆಯುತ್ತಿದೆ. ಅದರ ಜತೆಗೆ ಬೆಳಿಗ್ಗೆ ದೇವಾಲಯಕ್ಕೆ ಬರುವ ಭಕ್ತರಿಗೂ ಪ್ರಸಾದ ಸಿಗಲಿ ಎಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಸಾದ ವಿತರಣೆಗೆ ಸದ್ಯ ಹಣಕಾಸಿನ ಕೊರತೆ ಇಲ್ಲ. ದಾಸೋಹಕ್ಕೆ ಭಕ್ತರಿಂದಲೂ ನೆರೆವು ಸಿಗುತ್ತಿದೆ’ ಎಂದು ಹೇಳಿದರು.

ದೇವಾಲಯದಲ್ಲಿ ಚಂದ್ರಶಾಲೆ ನಿರ್ಮಾಣ ಮಾಡಲು ನೀಲನಕ್ಷೆ ಸಿದ್ಧವಾಗಿದ್ದು, ಭಕ್ತರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಮತ್ತು ನೆರಳಿನ ವ್ಯವಸ್ಥೆ ಮಾಡಲು ಸಮಿತಿಯ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸಿ.ಜಿ.ಕೃಷ್ಣ, ಪುರಸಭೆ ಅಧ್ಯಕ್ಷ ಎಂ.ಎಲ್‌. ದಿನೇಶ್ ಹಾಗೂ ವ್ಯಸ್ಥಾಪನಾ ಸಮಿತಿಯ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.