ADVERTISEMENT

‘ಕಾವೇರಿ ಆರತಿ’ಗೆ ₹5 ಲಕ್ಷ ದೇಣಿಗೆ ನೀಡಿದ ಅನಿವಾಸಿ ಭಾರತೀಯ ದಂಪತಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 16:11 IST
Last Updated 28 ಸೆಪ್ಟೆಂಬರ್ 2025, 16:11 IST
   

ಮಂಡ್ಯ: ‘ಕಾವೇರಿ ಆರತಿ’ ಕಾರ್ಯಕ್ರಮವು ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ’ ಎಂದು ಅಮೆರಿಕದ ಫೀನಿಕ್ಸ್‌ನಲ್ಲಿ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಈ ದಂಪತಿ ₹5 ಲಕ್ಷವನ್ನು ದೇಣಿಗೆಯಾಗಿ ನೀಡಿದ್ದಾರೆ.

‘ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಎಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ’ ಎಂದು ತಿಳಿಸಿದ್ದಾರೆ.

ADVERTISEMENT

‘ಜ್ಯೋತಿ ವಿಕಾಸ ಅವರು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ₹5 ಲಕ್ಷ ಕಳುಹಿಸಿ ಕೊಟ್ಟಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.