ಶ್ರೀರಂಗಪಟ್ಟಣ: ಎನ್‌ಎಸ್‌ಎಸ್ ಶಿಬಿರಗಳು ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಕಲ್ಪಿಸಲಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಮಂಜುಳಾ ಆಲದಹಳ್ಳಿ ಹೇಳಿದರು.
ತಾಲ್ಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಮ್ಮಿಕೊಂಡಿದ್ದ ವಿಶೇಷ ವಾರ್ಷಿಕ ಶಿಬಿರದಲ್ಲಿ ಬುಧವಾರ ಸಂಜೆ ಅವರು ಮಾತನಾಡಿದರು.
‘ಶಿಬಿರಗಳಿಂದ ವಾಕ್ಚಾತುರ್ಯ, ನಾಯಕತ್ವ ಗುಣ, ವೈಚಾರಿಕ ದೃಷ್ಟಿಕೋನ ಬೆಳೆಯುತ್ತದೆ. ಗ್ರಾಮೀಣ ಜನರ ಜೀವನ ಪದ್ದತಿ ರ್ಥವಾಗುತ್ತದೆ. ಶ್ರಮದ ಮಹತ್ವ ತಿಳಿಸಿಕೊಡುವ ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತಪ್ಪದೇ ಪಾಲ್ಗೊಳ್ಳಬೇಕು’ ಎಂದರು.
ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹುರುಗಲವಾಡಿ ರಾಮಯ್ಯ, ಆಲದಹಳ್ಳಿ ಮಂಜುಳಾ, ಕೂಡಲಕುಪ್ಪೆ ಸೋಮಶೇಖರ್ ಇತರರು ಜಾಗೃತಿ ಗೀತೆಗಳನ್ನು ಹಾಡಿದರು.
ವಿವೇಕಾನಂದ ಯೋಗ ಕಿಶೋರ ಕೇಂದ್ರದ ಸುಪ್ರಿಯಾ ಮತ್ತು ಮಿಥುನ್ ವರ ಯೋಗ ಪ್ರದರ್ಶನ ಗಮನ ಸೆಳೆಯಿತು. ಶಿಬಿರಾಧಿಕಾರಿ ಮೂರ್ತಿಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.