ADVERTISEMENT

ಮಂಡ್ಯ | ಕಾಂಗ್ರೆಸ್‌ ಶಾಸಕರಿಗೆ ಪಕ್ಷ ಬಿಟ್ಟು ಬರಲು ಆಫರ್‌: ಆರೋಪ: BJP ದೂರು

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2024, 13:01 IST
Last Updated 26 ಆಗಸ್ಟ್ 2024, 13:01 IST
   

ಮಂಡ್ಯ: ‘ಬಿಜೆಪಿಯ ಕೇಂದ್ರ ನಾಯಕರು ಕಾಂಗ್ರೆಸ್‌ ಪಕ್ಷದ ಶಾಸಕರಿಗೆ ಪಕ್ಷ ಬಿಟ್ಟು ಬರಲು ₹100 ಕೋಟಿ ಆಫರ್‌ ಒಡ್ಡುತ್ತಿದ್ದಾರೆ’ ಎಂದು ಆಧಾರರಹಿತ ಮತ್ತು ದುರುದ್ದೇಶಪೂರ್ವಕವಾಗಿ ಆರೋಪ ಮಾಡಿರುವ ಮಂಡ್ಯ ಶಾಸಕ ಪಿ.ರವಿಕುಮಾರ್‌ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ ಮತ್ತು ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್‌ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮಂಡ್ಯ ಪಶ್ಚಿಮ ಪೊಲೀಸ್‌ ಠಾಣೆಗೆ ಸೋಮವಾರ ದೂರು ನೀಡಿದರು.

ಕಾಂಗ್ರೆಸ್‌ ಸರ್ಕಾರ ಪತನಗೊಳಿಸಲು ಆಪರೇಷನ್‌ ಕಮಲ ನಡೆಸುತ್ತಿದ್ದಾರೆ ಎಂದು ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ಸುಳ್ಳು ಹೇಳಿಕೆ ನೀಡಲಾಗಿದೆ. ಇದರಿಂದ ಬಿಜೆಪಿ ವರ್ಚಿಸ್ಸಿಗೆ ಧಕ್ಕೆಯಾಗುವ ಸಂಭವವಿದೆ. ನಾಯಕರ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಯತ್ನಿಸಿದ್ದಾರೆ. ಈ ಕಾರಣದಿಂದ ಶಾಸಕ ಪಿ.ರವಿಕುಮಾರ್‌ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ದೂರಿದ್ದಾರೆ.

‘ನನ್ನ ಬಳಿ ದಾಖಲೆಗಳಿವೆ’

ADVERTISEMENT

‘ಪ್ರಜಾಪ್ರಭುತ್ವವನ್ನು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ. ₹2 ಸಾವಿರ ಕೋಟಿ ಆರೋಪ ಮಾಡಿದ್ದ ಶಾಸಕ ಯತ್ನಾಳ್‌ ವಿರುದ್ಧ ಬಿಜೆಪಿ ದೂರು ಕೊಡಲಿ. ಶ್ರೀನಿವಾಸಗೌಡ ವಿರುದ್ಧವೂ ದೂರು ಕೊಡಬೇಕು. ಕಾಂಗ್ರೆಸ್‌ ಶಾಸಕರಿಗೆ ಆಫರ್‌ ನೀಡಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಅದನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಕೊಡುತ್ತೇನೆ. ಯಾವ ಹೋಟೆಲ್‌ನಲ್ಲಿ ಕುಳಿತು ಮಾತನಾಡಿದ್ದಾರೆ ಎಂಬ ದಾಖಲೆ ಕೊಡುತ್ತೇನೆ’ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.