
ಪ್ರಜಾವಾಣಿ ವಾರ್ತೆ
ಮಂಡ್ಯ: ಕೇಂದ್ರ ಸರ್ಕಾರ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ಎಣ್ಣೆಕಾಳು ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆ ಕಡಿಮೆ ಮಾಡಲು, ದೇಶೀಯ ಎಣ್ಣೆಕಾಳುಗಳ ಉತ್ಪಾದನೆ ಹೆಚ್ಚಿಸಲು ‘ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ಎಣ್ಣೆಕಾಳು ಯೋಜನೆ’ಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳ ಸೌಲಭ್ಯ ಪಡೆಯಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕರ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಆಸಕ್ತರು ನ.7 ರೊಳಗೆ ವಿಸ್ತೃತ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ಕಚೇರಿ, ಮಂಡ್ಯ ಜಂಟಿ ಕೃಷಿ ನಿರ್ದೇಶಕ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.