ADVERTISEMENT

‘ಶಾಂತಿಯ ಸಂಕೇತವಾಗಿ ಒಲಿಂಪಿಕ್‌ ದಿನದ ಓಟ’

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 13:57 IST
Last Updated 6 ಜುಲೈ 2019, 13:57 IST
ಒಲಿಂಪಿಕ್‌ ದಿನದ ಓಟದಲ್ಲಿ ಪಾಲ್ಗೊಂಡಿದ್ದ ಯುವಜನರು
ಒಲಿಂಪಿಕ್‌ ದಿನದ ಓಟದಲ್ಲಿ ಪಾಲ್ಗೊಂಡಿದ್ದ ಯುವಜನರು   

ಮಂಡ್ಯ: ಅಂತರರಾಷ್ಟ್ರೀಯ ಒಲಿಂಪಿಕ್‌ ಸಂಸ್ಥೆ ಸ್ಥಾಪನೆಗೊಂಡ ನೆನಪಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ ವತಿಯಿಂದ ಶನಿವಾರ ಒಲಂಪಿಕ್ ದಿನದ ಓಟ ನಡೆಯಿತು.

ಕರ್ನಾಟಕ ಒಲಿಂಪಿಕ್‌ ಸಂಸ್ಥೆ ಉಪಾಧ್ಯಕ್ಷ ಕೆ.ಗೋವಿಂದರಾಜು ಮಾತನಾಡಿ ‘ಪ್ರತಿ ವರ್ಷ ಶಾಂತಿಯ ಸಂಕೇತವಾಗಿ ಒಲಿಂಪಿಕ್‌ ದಿನದ ಓಟ ಆಯೋಜಿಸಲಾಗುತ್ತದೆ. ಅಂತೆಯೇ, ಈವರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿದ್ದು, ಈ ವರ್ಷ ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಆರಂಭವಾದ ಓಟ ಮರೀಗೌಡ ವೃತ್ತ, ಬೆಸಗರಹಳ್ಳಿ ರಾಮಣ್ಣ ವೃತ್ತ, ಬಾಲಭವನದ ಮಾರ್ಗವಾಗಿ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು. ಓಟದಲ್ಲಿ ಭಾಗವಹಿಸಿದವರಿಗೆ ಟೀ ಶರ್ಟ್ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಜತೆಗೆ ಲಘು ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಕಲಾ ತಂಡಗಳ ಪ್ರದರ್ಶನ ಮೆರುಗು ನೀಡಿತ್ತು.

ADVERTISEMENT

ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರು ಓಟಕ್ಕೆ ಚಾಲನೆ ನೀಡಿದರು. ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಯಾಲಕ್ಕಿಗೌಡ, ಕ್ರೀಡಾಪಟು ರವಿಶಂಕರೇಗೌಡ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅನಂತರಾಜು, ನಗರಸಭೆ ಪೌರಾಯುಕ್ತ ಲೋಕೇಶ್, ಯುವ ಜನ ಸೇವಾ ಮತ್ತು ಕ್ರೀಡೆ ಇಲಾಖೆ ಸಹಾಯಕ ನಿರ್ದೇಶಕ ನಂದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.