ಮದ್ದೂರು: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತೀಯ ಸೇನೆಗೆ ಶುಭಕೋರಿ ಪಟ್ಟಣದ ಕಾಶಿ ವಿಶ್ವೇಶ್ವರಯ್ಯ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿಯಿಂದ ಶುಕ್ರವಾರ ವಿಶೇಷ ಪೂಜೆ ನಡೆಸಲಾಯಿತು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್ ಮಾತನಾಡಿ, ‘ಪಾಕಿಸ್ತಾನಕ್ಕೆ ನಮ್ಮ ಭಾರತೀಯ ಸೇನೆ ತಕ್ಕ ಪಾಠ ಕಲಿಸುತ್ತಿದೆ. ದೇಶಕ್ಕಾಗಿ ಹೋರಾಡುತ್ತಿರುವ ನಮ್ಮ ಸೈನಿಕರಿಗೆ ಶುಭವಾಗಲಿ, ದೇಶಕ್ಕೆ ವಿಜಯವನ್ನು ತರಲಿ’ ಎಂದು ಹಾರೈಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ಯ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿಯವರು ಉಗ್ರರ ಹುಟ್ಟಡಗಿಸಲು ಪಣತೊಟ್ಟಿದ್ದಾರೆ. ಅದಕ್ಕೆ ದೇವರ ಆಶೀರ್ವಾದವೂ ಇರಲಿದೆ. ಅದಕ್ಕಾಗಿ ವಿಶೇಷ ಪೂಜೆ ನಡೆಸಲಾಗಿದೆ’ ಎಂದು ತಿಳಿಸಿದರು.
ಮುಖಂಡರಾದ ಗುರುಸ್ವಾಮಿ, ಕದಲೂರು ನವೀನ್, ಎಂ.ಸಿ. ಸಿದ್ದು, ಲಿಂಗರಾಜು, ಕೆಂಪು ಬೋರಯ್ಯ, ರಮೇಶ್, ಅಭಿ, ಸುನಿಲ್ ಸೇರಿದಂತೆ ಬಿಜೆಪಿಯ ಮಹಿಳಾ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.