ADVERTISEMENT

ಮಂಡ್ಯ | ಕೃಷಿ ಕ್ಷೇತ್ರದ ಸಮಸ್ಯೆ ಪರಿಹರಿಸಿ: ಸಿಇಒ

ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 5:38 IST
Last Updated 11 ಆಗಸ್ಟ್ 2025, 5:38 IST
ಮಂಡ್ಯ ತಾಲ್ಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್‌.ನಂದಿನಿ ಅವರು ಬಟ್ಟೆ ಬ್ಯಾಗ್ ಹಾಗೂ ಗಿಡ ವಿತರಿಸಿದರು 
ಮಂಡ್ಯ ತಾಲ್ಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್‌.ನಂದಿನಿ ಅವರು ಬಟ್ಟೆ ಬ್ಯಾಗ್ ಹಾಗೂ ಗಿಡ ವಿತರಿಸಿದರು    

ಮಂಡ್ಯ: ‘ನಮ್ಮ ದೇಶದ ಪ್ರಮುಖ ಬೆನ್ನೆಲುಬು ಕೃಷಿ. ಜಿಲ್ಲೆಯಲ್ಲಿ ಕೃಷಿಯನ್ನು ನಂಬಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬದುಕು ಕಟ್ಟಿಕೊಂಡಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ತಿಳಿಸಿದರು.

ತಾಲ್ಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೃಷಿ ಮಹಾವಿದ್ಯಾಲಯ ವಿ.ಸಿ. ಫಾರಂ ವತಿಯಿಂದ ಶುಕ್ರವಾರ ನಡೆದ ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಡಿ.ಆರ್‌.ಪಿ.ಬಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಬಟ್ಟೆ ಬ್ಯಾಗ್ ಹಾಗೂ ಗಿಡ ವಿತರಣೆ ಮಾಡಿ ಅವರು ಮಾತನಾಡಿದರು.

‘ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಗುರುತಿಸಿ ಅರ್ಥ ಮಾಡಿಕೊಳ್ಳಬೇಕು. ಕೃಷಿಯಲ್ಲಿ ಮೂಲಭೂತವಾಗಿ ಇರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವುದು ಅತಿ ಮುಖ್ಯ. ನಾವೆಲ್ಲರೂ ರೈತಾಪಿ ವರ್ಗದಿಂದ ಬಂದಿರುವವರು’ ಎಂದರು.

ADVERTISEMENT

‘ವಿಶ್ವವಿದ್ಯಾಲಯಗಳಲ್ಲಿ ಕೃಷಿ ಕುರಿತಾಗಿ ಕಲಿತಿರುವುದು ಕೇವಲ ಪುಸ್ತಕದಲ್ಲಿ ಮಾತ್ರ ಉಳಿಯಬಾರದು. ಬದಲಾಗಿ ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಬೇಕು’ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಂ.ಕೃಷ್ಣ, ಆರ್.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಸಿ.ಕೆ. ಪಾಪಯ್ಯ, ದೇವರಾಜು, ಎನ್ಎಸ್ಎಸ್ ಶಿಬಿರಾಧಿಕಾರಿ ಪ್ರವೀಣ್ ಕುಮಾರ್ ಹಾಜರಿದ್ದರು. 

ಗ್ರಾಮ ಪಂಚಾಯಿತಿಗಳಲ್ಲಿ ಒಣ ಕಸವನ್ನು ಯಾರು ಹೆಚ್ಚು ಸಂಗ್ರಹಣೆ ಮಾಡಿ ನಿರ್ವಹಣೆ ಮಾಡುತ್ತಾರೋ ಅವರಿಗೆ ‘ಚಾಲೆಂಜ್ ಫಂಡ್’ ನೀಡಲಾಗುವುದು
– ಕೆ.ಆರ್‌.ನಂದಿನಿ ಸಿಇಒ ಮಂಡ್ಯ ಜಿಲ್ಲಾ ಪಂಚಾಯಿತಿ
ಸಾರ್ವಜನಿಕರು ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಗ್ರಾಮೀಣ ಭಾಗದ ಜನರು ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಿ –
ಸಿ.ಎಂ. ದ್ಯಾವಪ್ಪ ಮಂಡ್ಯ ಜಿಲ್ಲಾ ಕೆಡಿಪಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.