ADVERTISEMENT

ಪಹಲ್ಗಾಮ್‌ ಘಟನೆಯನ್ನು ಸಹಿಸುವುದಿಲ್ಲ: ಶಾಸಕ ಉದಯ್

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2025, 12:42 IST
Last Updated 24 ಏಪ್ರಿಲ್ 2025, 12:42 IST
ಮದ್ದೂರು ತಾಲ್ಲೂಕಿನ ಕಬ್ಬಾರೆ ಗ್ರಾಮದಲ್ಲಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ. ಉದಯ್ ಗುರುವಾರ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಚೆಲುವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಚೆಲುವರಾಜು, ಶೈಲಜಾ, ಬೀರೇಶ್, ಹಳ್ಳಿಕೆರೆ ಸುರೇಶ್, ಶ್ರೀನಿವಾಸ್, ಪ್ರಭಾಕರ್ ಹಾಜರಿದ್ದರು
ಮದ್ದೂರು ತಾಲ್ಲೂಕಿನ ಕಬ್ಬಾರೆ ಗ್ರಾಮದಲ್ಲಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ. ಉದಯ್ ಗುರುವಾರ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಚೆಲುವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಚೆಲುವರಾಜು, ಶೈಲಜಾ, ಬೀರೇಶ್, ಹಳ್ಳಿಕೆರೆ ಸುರೇಶ್, ಶ್ರೀನಿವಾಸ್, ಪ್ರಭಾಕರ್ ಹಾಜರಿದ್ದರು   

ಮದ್ದೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಕೃತ್ಯವನ್ನು ಭಾರತೀಯರಾದ ನಾವು ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.

ತಾಲ್ಲೂಕಿನ ಕಬ್ಬಾರೆ ಗ್ರಾಮದಲ್ಲಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗೂ ಅರುವನಹಳ್ಳಿಯಲ್ಲಿ ₹29 ಲಕ್ಷ ವೆಚ್ಚದ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಕಾಶ್ಮೀರ ನಮ್ಮ ದೇಶದ ಮುಕುಟವಿದ್ದ ಹಾಗೆ. ಅಲ್ಲಿ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ. ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕು. ದೇಶವೂ ಭಯೋತ್ಪಾದಕರ ವಿರುದ್ಧ ಯಾವುದೇ ಮುಲಾಜಿಲ್ಲದ ಕ್ರಮ ಕೈಗೊಳ್ಳುವ ಮೂಲಕ ನಮ್ಮ ಶಕ್ತಿ ಸಾಮರ್ಥ್ಯವನ್ನು ತೋರಿಸಬೇಕಾಗಿರುವ ಸಂದರ್ಭ ಬಂದಿದೆ’ ಎಂದರು.

ADVERTISEMENT

‘ತಾಲ್ಲೂಕು ವ್ಯಾಪ್ತಿಯಲ್ಲಿ ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ನೂತನ ಕೊಠಡಿ ನಿರ್ಮಾಣ ಮಾಡುವ ಕೆಲಸಕ್ಕೆ ಒತ್ತು ನೀಡುತ್ತಿದ್ದೇನೆ. ಈಗ ಬೇಸಿಗೆ ರಜೆ ಇದ್ದು, ಶಾಲೆಗಳು ಆರಂಭವಾಗುವುದಕ್ಕೂ ಮುನ್ನ ಕೊಠಡಿಗಳ ನಿರ್ಮಾಣ ಮಾಡಲಾಗುವುದು’ ಎಂದರು.

‘ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಗಮನ ನೀಡುತ್ತಿದ್ದು ಇಂದು ಕಬ್ಬಾರೆ - ಸೋಮನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ’ ಎಂದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಚೆಲುವರಾಜು, ಶೈಲಜಾ, ಬೀರೇಶ್, ಹಳ್ಳಿಕೆರೆ ಸುರೇಶ್, ಶ್ರೀನಿವಾಸ್, ಪ್ರಭಾಕರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.