ADVERTISEMENT

ಪಾಂಡವಪುರ | ಪತಿಯಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಸಾವು

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2024, 14:44 IST
Last Updated 20 ಆಗಸ್ಟ್ 2024, 14:44 IST
ಅನಿತಾ
ಅನಿತಾ   

ಪಾಂಡವಪುರ: ಪತಿಯಿಂದಲೇ ಮಾರಾಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಪಟ್ಟಣದ ಶಿಕ್ಷಕಿ ವೈ.ಎನ್.ಅನಿತಾ (37) ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿ ಮೃತಪಟ್ಟರು.

ಪಟ್ಟಣದ ಖಾಸಗಿ ಶಾಲೆಯಲ್ಲಿ ಶಿಕ್ಷಕಿ ಶಾಂತಿನಗರದ ನಿವಾಸಿ ಅನಿತಾ ಅವರು ರಾಗಿಮುದ್ದನಹಳ್ಳಿ ಪ್ರೌಢಶಾಲೆ ಶಿಕ್ಷಕ ಪತಿ ನಟರಾಜುವಿನಿಂದ ತೀವ್ರ ಹಲ್ಲೆಗೊಳಗಾಗಿದ್ದರು.

ಪತಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಕಳೆದ ಶುಕ್ರವಾರ ದಂಪತಿ ನಡುವೆ ಜಗಳ ನಡೆದು, ಪತಿ ನಟರಾಜು ಮನೆಯಲ್ಲಿದ್ದ ಸುತ್ತಿಗೆಯಿಂದ ಪತ್ನಿಯ ತಲೆಯ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದ.

ADVERTISEMENT

ಗಾಯಗೊಂಡಿದ್ದ ಅನಿತಾ ಅವರನ್ನು ತಕ್ಷಣ ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೆದುಳು ನಿಷ್ಕ್ರಿಯೆಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಿತಾ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿ ನಟರಾಜು ಅವರನ್ನು ಪಟ್ಟಣದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಮೃತ ಅನಿತಾ ಅವರ ಅಂತ್ಯಕ್ರಿಯೆಯು ಮಂಗಳವಾರ ಪಟ್ಟಣದಲ್ಲಿ ನೆರವೇರಿತು. ಮೃತ ಅನಿತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.