
ಪಾಂಡವಪುರ: ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ, ನರೇಗಾ ಉಳಿಸಲು ಒತ್ತಾಯಿಸಿ ಸಿಐಟಿಯು ಗುರುವಾರ ಪ್ರತಿಭಟನೆ ನಡೆಸಿತು.
ಪಟ್ಟಣದ ಪಾಂಡವ ಕ್ರೀಡಾಂಗಣದಿಂದ ಸಿಐಟಿಯು ಜಿಲ್ಲಾ ಅಧ್ಯಕ್ಷ ಎಂ.ಎಂ.ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಮೆರವಣಿಗೆ ಹೊರಟು ಐದು ದೀಪದಲ್ಲಿ ಜಮಾಯಿಸಿ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧ ನೀತಿಯನ್ನು ಖಂಡಿಸಿತು.
ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಬೇಕು, ವಿಬಿ ರಾಜ್ ಜಿ ಕಾಯ್ದೆ ರದ್ದುಗೊಳಿಸಬೇಕು. ನರೇಗಾ ಪುನರ್ ಸ್ಥಾಪಿಸಬೇಕು. ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು. ಭೂ ಸುಧಾರಣಾ, ಎಪಿಎಂಸಿಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ವಿದ್ಯುಚ್ಚಕ್ತಿ ಖಾಸಗೀಕರಣ ಮಾಡಬಾರದು, ಬೀಜ ಕಾಯ್ದೆ ಹಿಂಪಡೆಯಬೇಕು. ವಿಮಾ ಕಾಯ್ದೆ ತಿದ್ದುಪಡಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ತರಲು ಉದ್ದೇಶಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗೆ ಸಂಬಂಧಿಸಿದ ಅಧಿಸೂಚನೆ ರದ್ದಪಡಿಸಬೇಕು. ಕಾರ್ಮಿಕರಿಗೆ ಕನಿಷ್ಠ ವೇನತ ಹೆಚ್ಚಳ ಮಾಡಲು ಅಧಿಸೂಚನೆ ಹೊರಡಿಸಬೇಕು. ಕೇಂದ್ರದ ಜನವಿರೋಧಿ ಕಾಯ್ದೆಗಳನ್ನು ಕರ್ನಾಟಕದಲ್ಲಿ ಜಾರಿಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘ ಬೆಂಬಲ: ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಕಾರ್ಯದರ್ಶಿ ವೈ.ಎಚ್.ಕೊಪ್ಪಲು ಮಂಜುನಾಥ್, ಮುಖಂಡರಾದ ಕೆನ್ನಾಳು ನಾಗರಾಜು, ವೈ.ಎಚ್.ಕೊಪ್ಪಲು ರಘು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.
ಪ್ರಾಂತ್ಯ ಕೃಷಿ ಕೂಲಿಕಾರರ ಸಂಘಟನೆಯ ಮುಖಂಡ ಸುರೇಂದ್ರ ನರಹಳ್ಳಿ, ಅಕ್ಷರ ದಾಸೋಹದ ತಾಲ್ಲೂಕು ಅಧ್ಯಕ್ಷೆ ಶಾರದಾ, ಕಾರ್ಯದರ್ಶಿ ಶೋಭಾ, ಖಜಾಂಚಿ ಸರಸ್ವತಿ, ಗ್ರಾಮ ಪಂಚಾಯಿತಿ ನೌಕರರ ಸಂಘದ ಕಾರ್ಯದರ್ಶಿ ನಾಗರಾಜು, ಖಜಾಂಚಿ ಸಿದ್ದರಾಮು, ಸ್ವಚ್ಚವಾಹಿನಿ ನೌಕರ ಚಿರಂಜೀವಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.