ಪಾಂಡವಪುರ: ಪಟ್ಟಣದಲ್ಲಿ ಕಸ ಸಂಗ್ರಹಣೆ ಮಾಡುವ ನೂತನ 2 ಬೋಲೆರೋ ವಾಹನಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ₹26 ಲಕ್ಷ ವೆಚ್ಚದಲ್ಲಿ 2 ಬೋಲೆರೋ ವಾಹಗಳನ್ನು ಖರೀದಿಸಲಾಗಿದೆ. ಪಟ್ಟಣದ ನಾಗರಿಕರು ಹಸಿ ಹಾಗೂ ಒಣ ಕಸವನ್ನು ಮನೆಯಲ್ಲಿಯೇ ವಿಂಗಡಿಸಿ ಕಸವನ್ನು ಕೊಟ್ಟರೆ ವಿಲೇವಾರಿ ಮಾಡಲು ಸುಲಭವಾಗಲಿದೆ’ ಎಂದರು.
‘ಪುರಸಭೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆಯಾಗಿತ್ತು. ಹೀಗಾಗಿ ಸಾಮಾನ್ಯ ಸಭೆಯಲ್ಲಿ ವಾಹನ ಖರೀದಿಸಲು ತೀರ್ಮಾನಿಸಲಾಗಿತ್ತು. ಮುಂದಿನ ದಿನಗಳಲ್ಲಿ ಕಸ ಸಂಗ್ರಹಣೆಗೆ ಮತ್ತಷ್ಟು ವಾಹನಗಳನ್ನು ಖರೀಸಲಾಗುವುದು’ ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷೆ ಜ್ಯೋತಿ ಲಕ್ಷ್ಮಿ ಬಾಬು, ಉಪಾಧ್ಯಕ್ಷ ಎಲ್.ಅಶೋಕ, ಮುಖ್ಯಾಧಿಕಾರಿ ಸತೀಶ್ ಕುಮಾರ್, ಸದಸ್ಯರು, ಅಧಿಕಾರಿಗಳು ಹಾಗೂ ನೌಕರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.