ADVERTISEMENT

ಫೆನ್ಸಿಂಗ್: ಪೂರ್ಣಚಂದ್ರ ತೇಜಸ್ವಿಗೆ ಚಿನ್ನ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 8:25 IST
Last Updated 23 ಫೆಬ್ರುವರಿ 2026, 8:25 IST
ಎಚ್.ಎಸ್.ಪೂರ್ಣಚಂದ್ರ ತೇಜಸ್ವಿ
ಎಚ್.ಎಸ್.ಪೂರ್ಣಚಂದ್ರ ತೇಜಸ್ವಿ   

ಪಾಂಡವಪುರ: ತಾಲ್ಲೂಕಿನ ಹರವು ಗ್ರಾಮದ ಎಚ್.ಎಸ್.ಪೂರ್ಣಚಂದ್ರ ತೇಜಸ್ವಿ, ಮಣಿಪುರದ ಇಂಫಾಲ್‌ನಲ್ಲಿ ಈಚೆಗೆ ನಡೆದ ಫೆನ್ಸಿಂಗ್ ನ್ಯಾಷನಲ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದರು.

ಚಾಂಪಿಯನ್‌ಶಿಪ್‌ನಲ್ಲಿ ಕೇರಳ, ದೆಹಲಿ, ಹರಿಯಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಸ್ಪರ್ಧಿಗಳ ವಿರುದ್ಧ ಉತ್ತಮ ಪ್ರದರ್ಶನ ನೀಡಿದರು.

ಪೂರ್ಣಚಂದ್ರ ತೇಜಸ್ವಿ ಅವರಿಗೆ ಹರವು ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.