ಮಂಡ್ಯ: ‘ಮಹಿಳೆಯರು ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಂಡು ಉತ್ತಮ ಆರೋಗ್ಯವನ್ನು ಹೊಂದಬೇಕಿದೆ’ ಎಂದು ಅಂತರರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಪಾರ್ವತಿ ಕಾಂತರಾಜ್ ತಿಳಿಸಿದರು.
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸ್ತ್ರೀರೋಗ ವಿಭಾಗದ ‘ಮಮತೆಯ ಮಡಿಲು’ ಅಂಗಳದಲ್ಲಿ ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ನಿಮಿತ್ತ ಜರುಗಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಪ್ರಪಂಚದ ವಿವಿಧ ರಾಷ್ಟ್ರಗಳಲ್ಲಿ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ 140ಕ್ಕೂ ಹೆಚ್ಚು ಪದಕಗಳನ್ನು ಗಳಿಸಿರುತ್ತೇನೆ. ಆದರೂ ಆಸಕ್ತಿ ಇನ್ನೂ ಕುಂದಿಲ್ಲ. ಪ್ರಪಂಚದ ಇತರೆ ರಾಷ್ಟ್ರಗಳಲ್ಲಿ ಕ್ರೀಡೆಗೆ ವಿಶೇಷವಾದಂತಹ ಕಾಳಜಿಯನ್ನು ಅಲ್ಲಿನ ಸರ್ಕಾರಗಳು ತೋರಿಸುತ್ತವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಬೇಕಾಗಿದೆ ಎಂದು ಹೇಳಿದರು.
ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮತ್ತು ವಿಶ್ರಾಂತ ಪ್ರಾಧ್ಯಾಪಕಿ ಪ್ರೊ.ಶ್ರೀದೇವಿ ಮಾತನಾಡಿದರು. ಮಿಮ್ಸ್‌ನ ಶುಶ್ರೂಷಕಿಯರ ಅಧೀಕ್ಷಕ ಅಧಿಕಾರಿಗಳಾದ ತುಳಸಿ, ರೇಣು, ಬಾಲ್‌ಬ್ಯಾಡ್ಮಿಂಟನ್ ತರಬೇತುದಾರ ಯಶ್ವಂತ್, ಮಮತೆಯ ಮಡಿಲುವಿನ ರವಿ, ಎಂ.ಬಿ. ಸುರೇಶ್ ಮತ್ತು ಶ್ರೀನಾಥ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.