
ಪ್ರಜಾವಾಣಿ ವಾರ್ತೆ
ಹಲಗೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಡಿ.ಹಲಸಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ.
ಹಲಗೂರು ಸಮೀಪದ ಬಾಣಸಮುದ್ರ ಗ್ರಾಮದ ನಿವಾಸಿ ನಿಂಗಯ್ಯ ಅವರ ಪುತ್ರ ರವಿಕುಮಾರ್ (48) ಮೃತ ವ್ಯಕ್ತಿ.
ಹಾರೋಹಳ್ಳಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಕೆಲಸ ಮುಗಿಸಿ ಸ್ವಗ್ರಾಮಕ್ಕೆ ತೆರಳಲು ಡಿ.ಹಲಸಹಳ್ಳಿ ಗೇಟ್‌ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಇಳಿದು ರಸ್ತೆ ದಾಟುತ್ತಿದ್ದರು. ಆಗ ಮಳವಳ್ಳಿ ಕಡೆಯಿಂದ ಬಂದ ಬೈಕ್ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ರವಿಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.