ನಾಪೋಕ್ಲು: ಪೆರಾಜೆ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಬಿಜೆಪಿ ಶಕ್ತಿ ಕೇಂದ್ರ ಪೆರಾಜೆ ವತಿಯಿಂದ ಮಂಗಳವಾರ ದೇವಸ್ಥಾನದ ಉಳ್ಳಾಕುಲ ಸ್ಥಾನದ ಪರಿಸರದಲ್ಲಿ ಸಾಗುವಾನಿ, ಮಹಾಗನಿ, ಬಿಲ್ವಪತ್ರೆ ಗಿಡ ನೆಟ್ಟು ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಆಡಳಿತ ಮುಕ್ತೇಸರ ಜಿತೇಂದ್ರ ನಿಡ್ಯಮಲೆ, ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಪಂಚಾಯತಿ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಹಾಗೂ ಕಾರ್ಯಕರ್ತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.