ಶ್ರೀರಂಗಪಟ್ಟಣ: ಪಟ್ಟಣದ ಸ್ನಾನಘಟ್ಟದ ಬಳಿ ಗುರುವಾರ ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೈಸೂರಿನ ಗಾಂಧಿನಗರ ಬಡಾವಣೆಯ ರಂಗಸ್ವಾಮಿ ಅವರ ಮಗ ವಿಜಯ್ (35) ಸಾವನ್ನಪ್ಪಿದ್ದಾರೆ. ‘ತಲೆಗೂದಲು ಮುಡಿ ಕೊಟ್ಟ ಬಳಿಕ ಸ್ನಾನಕ್ಕೆ ನದಿಗೆ ಇಳಿದಾಗ ವಿಜಯ್ ಕಾಲು ಜಾರಿ ಆಳದ ಗುಂಡಿಗೆ ಬಿದ್ದಿದ್ದಾರೆ. ನದಿಯ ದಡದಲ್ಲಿ ಇದ್ದವರು ಆವರನ್ನು ನದಿಯಿಂದ ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶ್ವಾಸಕೋಶಕ್ಕೆ ನೀರು ತುಂಬಿಕೊಂಡಿದ್ದ ಕಾರಣ ವಿಜಯ್ ಮಾರ್ಗಮಧ್ಯೆ ಅಸು ನೀಗಿದ್ದಾರೆ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.
ಪಂಚನಾಮೆ ನಡೆಸಿದ ಬಳಿಕ ವಿಜಯ್ ಮೃತದೇಹವನ್ನು ಕುಟುಂಬಕ್ಕೆ ಒಪ್ಪಿಸಲಾಯಿತು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.