ADVERTISEMENT

ಪ್ಲಾಸ್ಟಿಕ್‌ ತ್ಯಜಿಸಿ ಬಟ್ಟೆ ಬ್ಯಾಗ್‌ ಬಳಸಿ: ಸಿಇಒ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 12:52 IST
Last Updated 27 ಸೆಪ್ಟೆಂಬರ್ 2019, 12:52 IST
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಯಾಲಕ್ಕಿಗೌಡ ಅವರು ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್‌ ಬಳಕೆ ನಿಷೇಧ ಪ್ರತಿಜ್ಞಾವಿಧಿ ಬೋಧಿಸಿದರು
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಯಾಲಕ್ಕಿಗೌಡ ಅವರು ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್‌ ಬಳಕೆ ನಿಷೇಧ ಪ್ರತಿಜ್ಞಾವಿಧಿ ಬೋಧಿಸಿದರು   

ಮಂಡ್ಯ: ‘ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಬಟ್ಟೆ, ಕಾಗದ ಹಾಗೂ ಇತರ ಪರಿಸರ ಸ್ನೇಹಿ ಕೈಚೀಲ ಬಳಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಕಲ್ಲು ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿ, ನಗರಸಭೆ, ಡಯಟ್ ವತಿಯಿಂದ ನಡೆದ ಪ್ಲಾಸ್ಟಿಕ್ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪ್ಲಾಸ್ಟಿಕ್‌ ವಸ್ತುಗಳ ಬಳಕೆಯಿಂದಾಗಿ ವಾತಾವರಣ ಕಲುಷಿತಗೊಳ್ಳುತ್ತಿದೆ. ಯುವಜನರು ಈ ವಿಷಕಾರಿ ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವತ್ತ ಎಲ್ಲರೂ ಕೈಜೋಡಿಸಬೇಕು’ ಎಂದು ಹೇಳಿದರು.

ADVERTISEMENT

ನಗರಸಭೆ ಎಂಜಿನಿಯರ್ ಮೀನಾಕ್ಷಿ ಮಾತನಾಡಿ ‘ನಿತ್ಯ ಉತ್ಪತ್ತಿಯಾಗುವ ಕಸವನ್ನು ಒಣ ಕಸ ಹಾಗೂ ಹಸಿ ಕಸವನ್ನಾಗಿ ವಿಂಗಡಣೆ ಮಾಡಿ ನಗರಸಭೇ ವಾಹನಗಳಿಗೆ ನೀಡಬೇಕು. ಕಸ ಶುದ್ಧೀಕರಣ ಮೂಲಕ ಮರುಬಳಕೆಗೆ ಸಹಾಯ ಮಾಡಬೇಕು’ ಎಂದರು.

ಡಯಟ್ ಉಪನ್ಯಾಸಕ ಜಯಶಂಕರ್ ಅವರು ಪರಿಸರ ಗೀತೆಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಚಾರ್ಯ ಎಚ್.ಪಿ.ತಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ವೀಣಾ, ನಾಗೇಶ್ ರೂಪಶ್ರೀ, ಶಿಕ್ಷಕ ಸಿ.ಕೆ.ರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.