ಚುನಾವಣೆ
(ಸಾಂದರ್ಭಿಕ ಚಿತ್ರ)
ಕೆ.ಆರ್. ಪೇಟೆ: ತಾಲ್ಲೂಕು ಪ್ರಾಥಮಿಕ ಕೃಷಿ ಭೂ ಅಭಿವೃದ್ಧಿ ಸಹಕಾರ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ನೂತನ ಆಡಳಿತ ಮಂಡಳಿಯ 14 ನಿರ್ದೇಶಕರ ಸ್ಥಾನಗಳಿಗೆ ಫೆ.8ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್- ಬಿಜೆಪಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಸೇರಿ ಒಟ್ಟು 34 ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ತಾಲ್ಲೂಕನ್ನು 14 ವೃತ್ತಗಳಾಗಿ ಮೀಸಲಾತಿವಾರು ವಿಭಾಗ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿತ್ತು. ಫೆ.2 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದ್ದು ಮತದಾನವು ಫೆ.8ರಂದು ಪಟ್ಟಣದ ಶತಮಾನದ ಶಾಲೆಯಲ್ಲಿ(ಕೆಪಿಎಸ್) ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಯಾಗಿರುವ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಸುಶ್ಮಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.