ಸಾಂದರ್ಭಿಕ ಚಿತ್ರ
ಮಂಡ್ಯ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಅಪರಾಧಿಗೆ, ಮಂಡ್ಯದ ಎಫ್‌ಟಿಎಸ್‌ಸಿ-1(ಪೋಕ್ಸೊ ವಿಶೇಷ) ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 8 ವರ್ಷ ಜೈಲು ಶಿಕ್ಷೆ ಮತ್ತು ₹6 ಸಾವಿರ ದಂಡ ವಿಧಿಸಿದ್ದಾರೆ.
ಕೆ.ಆರ್.ಪೇಟೆ ತಾಲ್ಲೂಕು ಶ್ರವಣಹಳ್ಳಿ ಗ್ರಾಮದ ರಾಮಕೃಷ್ಣ (34) ಶಿಕ್ಷೆಗೊಳಗಾದ ವ್ಯಕ್ತಿ.
ಈತ 2023ರಲ್ಲಿ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಕಿಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಬ್‌ಇನ್‌ಸ್ಪೆಕ್ಟರ್ ಸಿದ್ದಲಿಂಗ ಬಾನಸಿ ತನಿಖೆ ನಡೆಸಿದ್ದು, ಆರೋಪಿ ವಿರುದ್ಧ ಇನ್‌ಸ್ಪೆಕ್ಟರ್ ರೇವತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನೊಂದ ಬಾಲಕಿಗೆ ಆರೋಪಿಯು ₹50 ಸಾವಿರ ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಎಂ.ಜೆ. ಪೂರ್ಣಿಮಾ ವಕಾಲತ್ತು ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.