ADVERTISEMENT

ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 16:08 IST
Last Updated 1 ನವೆಂಬರ್ 2019, 16:08 IST
ಕೆರಗೋಡು ಸಮೀಪದ ದುದ್ದ ಹೋಬಳಿ ಮೊಡಚಾಕನಹಳ್ಳಿ ಗ್ರಾಮದಲ್ಲಿ ಗುರುವಾರ ಶಾಸಕ ಸಿ.ಎಸ್.ಪುಟ್ಟರಾಜು ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು
ಕೆರಗೋಡು ಸಮೀಪದ ದುದ್ದ ಹೋಬಳಿ ಮೊಡಚಾಕನಹಳ್ಳಿ ಗ್ರಾಮದಲ್ಲಿ ಗುರುವಾರ ಶಾಸಕ ಸಿ.ಎಸ್.ಪುಟ್ಟರಾಜು ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು   

ಕೆರಗೋಡು: ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿ ಮೊಡಚಾಕನಹಳ್ಳಿ ಗ್ರಾಮದಲ್ಲಿ ಗುರುವಾರ ಶಾಸಕ ಸಿ.ಎಸ್.ಪುಟ್ಟರಾಜು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಗಣೇಶ ದೇವಸ್ಥಾನದ ಸಭಾಭವನ, ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಘಟಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಗ್ರಾಮದ ಬೀದಿಗಳಲ್ಲಿ ಸಂಚರಿಸಿದ ಶಾಸಕರು ಅಭಿವೃದ್ಧಿ ಕಾಮಗಾರಿಗಳ ಕುರಿತು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಬಳಿಕ ಬಿಳಗೂಲಿ ಗ್ರಾಮಕ್ಕೆ ಭೇಟಿ ನೀಡಿ ನಡೆದಿರುವ ಅಭಿವೃದ್ಧಿ ಕಾಮಗಾರಿ ಕುರಿತು ಪರಿಶೀಲನೆ ನಡೆಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಬಿ.ಬೆಟ್ಟಸ್ವಾಮಿ ಎಪಿಎಂಸಿ ಸದಸ್ಯ ಶಿವಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಮುಖಂಡ ಹೊಳಲು ಯೋಗೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.