
ಮಳವಳ್ಳಿ: ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ವಿವಿಧ ಇಲಾಖೆಗಳ ಕಚೇರಿಗಳನ್ನು ಒಳಗೊಂಡ ‘ಪ್ರಜಾಸೌಧ ಆಡಳಿತ ಕೇಂದ್ರ’ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಂಜೆ ಶಂಕುಸ್ಥಾಪನೆ ನೇರವೇರಿಸಿದರು.
ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ನಿರ್ಮಸಿರುವ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹16 ಕೋಟಿ ವೆಚ್ಚದ ಪ್ರಜಾಸೌಧ ನಿರ್ಮಾಣಕ್ಕೆ ಚಾಲನೆ ನೀಡಿದರು.
ನಾಲ್ಕು ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯಕ್ಕೀಡಾಗಿ ಕೊಲೆಯಾದ ಬಾಲಕಿಯ ಕುಟುಂಬಸ್ಥರು, ಬಾಲಕಿಯ ಹೆಸರನ್ನು ಪಟ್ಟಣದ ಪ್ರಮುಖ ವೃತ್ತಕ್ಕೆ ಇಡಬೇಕು ಎಂದು ಮನವಿ ಸಲ್ಲಿಸಿದರು. ನಂತರ ಮುಖ್ಯಮಂತ್ರಿಯವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಗಣ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.