ಬಂಧನ
(ಪ್ರಾತಿನಿಧಿಕ ಚಿತ್ರ)
ಮದ್ದೂರು : ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕಳೆದ ಶನಿವಾರ (ಜೂನ್ 7) ಗರ್ಭಿಣಿಯ ಅನುಮಾನಾಸ್ಪದ ಸಾವಿಗೆ ಸಂಬಂಧಪಟ್ಟಂತೆ ಆಕೆಯ ಪತಿ ಚಂದನ್ ಗೌಡ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮೂಲತಃ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ ಹಾಗೂ ಆಶಾ (19) ಇಬ್ಬರೂ ಪ್ರೇಮಿಗಳು ಕಳೆದ ಒಂದೂವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು.
ಬಳಿಕ ಚಂದನ್ ಗೌಡ ಎಳೆ ನೀರು ವ್ಯಾಪಾರ ಮಾಡಿಕೊಂಡು ಮದ್ದೂರು ಪಟ್ಟಣದ ಚನ್ನೆಗೌಡ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಾಗಿದ್ದರು. ಆದರೆ, ದಿನ ಕಳೆದಂತೆ ಪತಿ ಪತ್ನಿ ನಡುವೆ ಮನಸ್ತಾಪ ಉಂಟಾಗಿದೆ. ಪತ್ನಿ ಆಶಾ ಯಾರೋದಿಂಗೋ ಮೊಬೈಲ್ ನಲ್ಲಿ ಬ್ಯುಸಿ ಇರುತ್ತಾಳೆ,ಬೇರೆ ಯಾರದೋ ಜೊತೆ ಅಕ್ರಮ ಸಂಬಂಧವಿದೆ ಎಂದು ಪ್ರತಿ ದಿನ ಜಗಳವಾಗುತ್ತಿತ್ತು ಎನ್ನಲಾಗಿದೆ.
ಆದರೆ, ಅದನೆಲ್ಲಾ ಮರೆತು ಕಳೆದ ಭಾನುವಾರ ಪತ್ನಿ ಆಶಾ ಗೆ ಸೀಮಂತ ಕಾರ್ಯಕ್ರಮವನ್ನು ಮಾಡಲು ತಯಾರಿ ಕೂಡ ನಡೆಸಲಾಗಿತ್ತು.
ಆದರೆ, ಶುಕ್ರವಾರ ರಾತ್ರಿ ಮತ್ತೆ ಇಬ್ಬರ ನಡುವೆ ಜಗಳ ಉಂಟಾಗಿ ತೀವ್ರ ಸ್ವರೂಪ ಪಡೆದು ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದು ಉಸಿರು ಕಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮದ್ದೂರು ಪೋಲೀಸರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪತಿ ಚಂದನ್ ಗೌಡ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಿದಾಗ ಯನ್ನು ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ,
ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.