ಪಾಂಡವಪುರ: ಶಾಲೆ ಆರಂಭದ ನಿಮಿತ್ತ ಗುರುವಾರ ಶಿಕ್ಷಕರು ಶಾಲೆಗಳಿಗೆ ಹಾಜರಾಗಿ ಪೂರ್ವ ಸಿದ್ಧತೆ ಮಾಡಿಕೊಂಡರು.
ವಿದ್ಯಾರ್ಥಿಗಳ ಸಹಕಾರದೊಂದಿಗೆ ಶಾಲಾ ಆವರಣ, ಕೊಠಡಿಗಳು, ಅಡುಗೆ ಮನೆ, ಶುದ್ಧ ಕುಡಿಯುವ ನೀರು, ಶೌಚಾಲಯಗಳ ಸ್ವಚ್ಛತೆ ನಡೆಸಿದರು.
ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ಬಿಇಒ ಕಚೇರಿಯಿಂದ ಈಗಾಗಲೇ ಎಲ್ಲಾ 176 ಸರ್ಕಾರಿ ಶಾಲೆಗಳು ಹಾಗೂ 23 ಸರ್ಕಾರಿ ಪ್ರೌಢಶಾಲೆಗಳಿಗೆ ಸರಬರಾಜು ಮಾಡಲಾಗಿದೆ. ಎಸ್‌ಡಿಎಂಸಿ ಸಭೆಯಲ್ಲಿ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನ, ಸೇತುಬಂಧ ಶಿಕ್ಷಣ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ ಮಧ್ಯಾಹ್ನ ಬಿಸಿಯೂಟದ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಿದ್ಧತೆ ನಡೆದಿದೆ.
ಮೇ 30ರಂದು ಬೆಳಿಗ್ಗೆ 9.30ಕ್ಕೆ ಪೋಷಕರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಶಾಲಾ ಪ್ರಾರಂಭೋತ್ಸವದಲ್ಲಿ ಭಾಗವಹಿಸುವಂತೆ ಬಿಇಒ ರವಿಕುಮಾರ್ ಮತ್ತು ಬಿಆರ್‌ಸಿ ಸಿ.ಪ್ರಕಾಶ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.