ADVERTISEMENT

ಸುತ್ತೂರು ಶಿವರಾತ್ರಿ ಮಹೋತ್ಸವ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 11:48 IST
Last Updated 16 ಡಿಸೆಂಬರ್ 2025, 11:48 IST
<div class="paragraphs"><p>ರಾಷ್ಟ್ರಪತಿ ದ್ರೌಪದಿ ಮುರ್ಮು</p></div>

ರಾಷ್ಟ್ರಪತಿ ದ್ರೌಪದಿ ಮುರ್ಮು

   

ಮಂಡ್ಯ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಗಮಿಸಿದರು. ಈ ವೇಳೆ ರಾಜ್ಯಪಾಲರು, ಕೇಂದ್ರ ಉಕ್ಕು ಹಾಗೂ ಕೈಗಾರಿಕೆ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಆತ್ಮೀಯ ಸ್ವಾಗತ ಕೋರಿದರು.

ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಳವಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಗೆ ಆಗಮಿಸಿದರು.

ADVERTISEMENT

ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಅವರು ಹೂ ಗುಚ್ಛ ನೀಡುವ ಮೂಲಕ‌ ಘನತೆವೆತ್ತ ರಾಷ್ಟ್ರಪತಿಗಳನ್ನು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.