ಮಳವಳ್ಳಿ: ಪ್ರಸ್ತುತದ ದಿನಮಾನಗಳಲ್ಲಿ ಪ್ರಕಟವಾಗುವ ಸುದ್ದಿಗಳ ಬಗ್ಗೆ ಪರಾಮರ್ಶೆ ಮಾಡಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ವಿತರಕರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ ಪತ್ರಕರ್ತರು ಆರೋಗ್ಯದ ಕಡೆಗೆ ಗಮನ ಹರಿಸಬೇಕು. ನಿವೇಶನ ಹಾಗೂ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ನೀಡಲಾಗುವುದು’ ಎಂದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತೀಕೆರೆ ಜಯರಾಮ್ ಮಾತನಾಡಿ, ನಿವೇಶನದ ಸಮಸ್ಯೆಗಳನ್ನು ಬಗೆಹರಿಸಿ ಬದಲಿ ನಿವೇಶನ ನೀಡುವಲ್ಲಿ ಶಾಸಕರು ಶ್ರಮವಹಿಸಿದ್ದಾರೆ ಎಂದರು.
ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪತ್ರಿಕಾ ವಿತರಕರನ್ನು ಅಭಿನಂದಿಸಲಾಯಿತು. ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶಾಸಕರು ಗಿಡಗಳನ್ನು ನೆಟ್ಟರು. ತಾಲ್ಲೂಕು ಸಂಘದ ಅಧ್ಯಕ್ಷ ಸಿ.ಸಿದ್ದರಾಜು ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ತಹಶೀಲ್ದಾರ್ ಎಸ್.ವಿ.ಲೊಕೇಶ್, ಮನ್ ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಸೋಮಶೇಖರ್ ಕೆರೆಗೋಡು, ಕೆ.ಎನ್.ನವೀನ್ ಕುಮಾರ್, ಸಿ.ಎನ್.ಮಂಜುನಾಥ್, ಜೆ.ಎಂ.ಬಾಲಕೃಷ್ಣ, ಆನಂದ್, ಕೆ.ಸಿ.ಮಂಜುನಾಥ್, ಬಿ.ಪಿ.ಪ್ರಕಾಶ್, ಎಚ್.ಉಮೇಶ್ ಮಾಳಿಗೆ, ಎ.ಬಿ.ಚೇತನ್ ಕುಮಾರ್, ಕೊಳ್ಳೇಗಾಲದ ಎಚ್.ಚಿಕ್ಕಮಾಳಿಗೆ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.