ADVERTISEMENT

ನಾಗಮಂಗಲ | ಪರಿಸರ ಸಂರಕ್ಷಣೆ ಮಾಡಿ: ದೀಪಕ್ ಪಾಟೀಲ್

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 13:32 IST
Last Updated 25 ಫೆಬ್ರುವರಿ 2024, 13:32 IST
<div class="paragraphs"><p>ನಾಗಮಂಗಲ ತಾಲ್ಲೂಕಿನ ಹೊನ್ನಬೆಟ್ಟದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಗಿಡಗಳಿಗೆ ನೀರುಣಿಸುವ ಕಾರ್ಯಕ್ರಮದಲ್ಲಿ ಗಿಡಗಳಿಗೆ ನೀರನ್ನು ಹಾಕಲಾಯಿತು.ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ್, ಸಿವಿಲ್ ನ್ಯಾಯಾಧೀಶ ಕೆ.ಪಿ.ಸಿದ್ಧಪ್ಪಾಜಿ, ವಲಯ ಅರಣ್ಯಾಧಿಕಾರಿ ಮಂಜುನಾಥ್&nbsp; ಭಾಗವಹಿಸಿದ್ದರು.</p></div>

ನಾಗಮಂಗಲ ತಾಲ್ಲೂಕಿನ ಹೊನ್ನಬೆಟ್ಟದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಗಿಡಗಳಿಗೆ ನೀರುಣಿಸುವ ಕಾರ್ಯಕ್ರಮದಲ್ಲಿ ಗಿಡಗಳಿಗೆ ನೀರನ್ನು ಹಾಕಲಾಯಿತು.ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ್, ಸಿವಿಲ್ ನ್ಯಾಯಾಧೀಶ ಕೆ.ಪಿ.ಸಿದ್ಧಪ್ಪಾಜಿ, ವಲಯ ಅರಣ್ಯಾಧಿಕಾರಿ ಮಂಜುನಾಥ್  ಭಾಗವಹಿಸಿದ್ದರು.

   

ನಾಗಮಂಗಲ: ಪರಿಸರ ಸಂರಕ್ಷಣೆ ಎಂಬುದು ಕೇವಲ ಆಚರಣೆಗೆ ಸೀಮಿತವಾಗದೆ ಅದು  ನಿರಂತರ ಮುಂದುರಿಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದೀಪಕ್ ಪಾಟೀಲ ಹೇಳಿದರು.

ತಾಲ್ಲೂಕಿನ ಹೊನ್ನಬೆಟ್ಟದಲ್ಲಿ  ಭಾನುವಾರ ಗಿಡಗಳಿಗೆ ನೀರೆರೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಮಳೆಗಾಲದಲ್ಲಿ ನೆಟ್ಟ ಗಿಡಗಳು ಬಿಸಿಲಿಗೆ ಒಣಗುವುದರಿಂದ ಬೇಸಿಗೆಯಲ್ಲಿ ನೀರು ಹಾಕಿದರೆ ಮಾತ್ರ ಅವುಗಳು ಉಳಿಯಲು ಸಾಧ್ಯವಾಗುತ್ತದೆ ಎಂದರು.

ADVERTISEMENT

ಆಗಸ್ಟ್ ತಿಂಗಳಿನಲ್ಲಿ ಮಾತೃ ಫೌಂಡೇಶನ್ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಎನ್.ಎಸ್.ಎಸ್, ಅರಣ್ಯ ಇಲಾಖೆ ಮತ್ತು ಬೆಂಗಳೂರು ವಕೀಲರ ಸಂಘದ ಸಹಯೋಗದಲ್ಲಿ ಹೈಕೋರ್ಟ್ ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಕಾನೂನು ವನ  ಪರಿಕಲ್ಪನೆಯಲ್ಲಿ ಎರಡು ಸಾವಿರ ಗಿಡಗಳನ್ನು ನೆಡಲಾಗಿತ್ತು.

ಮಾತೃ ಫೌಂಡೇಶನ್ ಅಧ್ಯಕ್ಷ ವಕೀಲ ಚಂದ್ರಕುಮಾರ್ ಮಾತನಾಡಿ,  ಹೊನ್ನ ಬೆಟ್ಟದಲ್ಲಿ ನಿರ್ದಿಷ್ಟ ದಿನಗಳಿಗೆ ನೀರನ್ನು ಹಾಕುವ ಕೆಲಸವನ್ನು ಮುಂದುವರಿಸಿ ಗಿಡಗಳನ್ನು ಉಳಿಸುತ್ತೇವೆ ಎಂದರು. ವಲಯ ಅರಣ್ಯಾಧಿಕಾರಿ ಮಂಜುನಾಥ್ ಮಾತನಾಡಿದರು. ವಿದ್ಯಾರ್ಥಿಗಳು, ನ್ಯಾಯಾಧೀಶರು, ವಕೀಲರು, ಉಪನ್ಯಾಸಕರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗ ಗಿಡಗಳಿಗೆ ಬಿಂದಿಗೆಯಲ್ಲಿ ನೀರನ್ನು ಹಾಕಿದರು.

ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ್, ಸಿವಿಲ್ ನ್ಯಾಯಾಧೀಶ ಕೆ.ಪಿ.ಸಿದ್ಧಪ್ಪಾಜಿ, ಉಪವಲಯ ಅರಣ್ಯಾಧಿಕಾರಿ ಮಂಜು, ಧರ್ಮದರ್ಶಿ ಮಾಯಣ್ಣಗೌಡ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೊಣನೂರು ಧನಂಜಯ್, ಉಪನ್ಯಾಸಕ ಚಂದ್ರಶೇಖರ್, ಸಚಿನ್ ಮತ್ತು ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.