ADVERTISEMENT

40ಕ್ಕೂ ಹೆಚ್ಚು ಕರುಗಳ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 8:15 IST
Last Updated 4 ಡಿಸೆಂಬರ್ 2020, 8:15 IST
ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುವಿನ ಕರುಗಳನ್ನು ರಕ್ಷಿಸಲಾಯಿತು
ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುವಿನ ಕರುಗಳನ್ನು ರಕ್ಷಿಸಲಾಯಿತು   

ಕೆ.ಆರ್.ಪೇಟೆ: ಬೆಂಗಳೂರಿನ ಕಡೆಗೆ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು 40ಕ್ಕೂ ಅಧಿಕ ಹಸುವಿನ ಕರುಗಳನ್ನು ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಗುರುವಾರ ರಕ್ಷಿಸಲಾಗಿದೆ.

ಮಾಹಿತಿಯಂತೆ ಅಕ್ಕಿಹೆಬ್ಬಾಳು ಗ್ರಾಮದ ಯುವಕರು ಕರುಗಳನ್ನು ಕೊಂಡೊಯ್ಯುತ್ತಿದ್ದ ವಾಹನವನ್ನು ಅಡ್ಡಗಟ್ಟಿದ್ದಾರೆ. ಆಗ ಚಾಲಕ ಪರಾರಿಯಾಗಿದ್ದಾನೆ. ನಂತರ ಪೊಲೀಸರಿಗೆ ವಿಷಯ ತಿಳಿಸಿ, ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಕ್ಕಿಹೆಬ್ಬಾಳು ಹೊರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ADVERTISEMENT

ಮಾನವೀಯತೆ ಮೆರೆದ ಗ್ರಾಮಸ್ಥರು: ಸುಮಾರು 40ಕ್ಕೂ ಅಧಿಕ ಕರುಗಳನ್ನು ಪೊಲೀಸ್ ಠಾಣೆಯ ಆವರಣದಲ್ಲಿ ವಾಹನದಿಂದ ಇಳಿಸಿ ಅವುಗಳಿಗೆ ಹಾಲುಣಿಸುವ ಕೆಲಸ ಮಾಡಿದ ಗ್ರಾಮಸ್ಥರು ಮತ್ತು ಯುವಕರು ನಂತರ ಪಾಂಡವಪುರ ತಾಲ್ಲೂಕಿನ ಬ್ಯಾಡರಹಳ್ಳಿಯ ಗೋಶಾಲೆಗೆ ಅವುಗಳನ್ನು ಬಿಡಲು ಕ್ರಮ ಕೈಗೊಂಡು ಮಾನವೀಯತೆ ಮೆರೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.