ADVERTISEMENT

ಪೌರಕಾರ್ಮಿಕರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ

ನಗರಸಭೆ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆ; ಸರ್ಕಾರದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 16:20 IST
Last Updated 3 ಜುಲೈ 2022, 16:20 IST
ಮಂಡ್ಯದ ನಗರಸಭೆ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಮುಖಂಡ ಗಣಿಗ ರವಿಕುಮಾರ್ ಮಾತನಾಡಿದರು. ಪವಿತ್ರಾ ಬೋರೇಗೌಡ, ಗೀತಾ, ನಯೀಂ, ರವಿ, ಎಚ್.ಕೆ.ರುದ್ರಪ್ಪ, ಬಿ.ಪಿ.ಪ್ರಕಾಶ್, ಶ್ರೀಧರ್ ಇದ್ದಾರೆ
ಮಂಡ್ಯದ ನಗರಸಭೆ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಮುಖಂಡ ಗಣಿಗ ರವಿಕುಮಾರ್ ಮಾತನಾಡಿದರು. ಪವಿತ್ರಾ ಬೋರೇಗೌಡ, ಗೀತಾ, ನಯೀಂ, ರವಿ, ಎಚ್.ಕೆ.ರುದ್ರಪ್ಪ, ಬಿ.ಪಿ.ಪ್ರಕಾಶ್, ಶ್ರೀಧರ್ ಇದ್ದಾರೆ   

ಮಂಡ್ಯ: ಕೆಲಸ ಕಾಯಂ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 3 ದಿನಗಳಿಂದ ನಗರಸಭೆ ಕಚೇರಿ ಮುಂದೆ ಪೌರಕಾರ್ಮಿಕರು ನಡೆಸುತ್ತಿರುವ ಅರ್ನಿಷ್ಟಾವಧಿ ಮುಷ್ಕರವನ್ನು ಬೆಂಬಲಿಸಿ ಕಾಂಗ್ರೆಸ್ ಮುಖಂಡರು ಧರಣಿ ನಡೆಸಿದರು.

ಕಾಂಗ್ರೆಸ್ ಮುಖಂಡ ಗಣಿಗ ರವಿಕುಮಾರ್ ಮಾತನಾಡಿ, ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ತಮ್ಮ ಆರೋಗ್ಯ ಲೆಕ್ಕಿಸದೆ ಕೆಲಸ ಮಾಡಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯವಾಗಿದೆ. ಪ್ರತಿನಿತ್ಯ ನಗರವನ್ನು ಅವರು ಸ್ವಚ್ಚಗೊಳಿಸದಿದ್ದರೆ ನಗರದ ಸೌಂದರ್ಯ ಹಾಳಾಗಿ, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಶಾಸಕರು, ಸಚಿವರು ತಮಗೆ ನೀಡುವ ವೇತನವನ್ನು ಮೂರು ಪಟ್ಟು ಹೆಚ್ಚಳ ಮಾಡಿ
ಕೊಳ್ಳುತ್ತಾರೆ. ಆದರೆ, ಕಷ್ಟಪಟ್ಟು ದುಡಿಯುವ ಶ್ರಮಿಕ ವರ್ಗದ ಹೊರಗುತ್ತಿಗೆ ಪೌರ ಕಾರ್ಮಿಕರ ವೇತನವನ್ನು ಮಾತ್ರ ಹೆಚ್ಚಳ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಸರ್ಕಾರಿ ಕೂಡಲೇ ಪೌರಕಾರ್ಮಿಕರ ಕಾಯಂಗೊಳಿಸುವುದು ಸೇರಿದಂತೆ ಅವರ ಬೇಡಿಕೆಗಳನ್ನು ಈಡೇರಿಸಬೇಕು. ಹೊರಗುತ್ತಿಗೆ ಕಸ ಸಾಗಿಸುವ ವಾಹನ ಚಾಲಕರು, ವಾಟರ್ ಮೆನ್, ಡಾಟಾ ಎಂಟ್ರಿ ನೌಕರರು, ಆಪರೇಟರ್‌ಗಳು, ಕಸ ನಿರ್ವಹಣೆ ಸಹಾಯಕರು, ಒಳಚರಂಡಿ ಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕರಿಗೂ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸಲು ಮುಂದಾಗಬೇಕು. ಅಲ್ಲದೆ, ನಿರಂತರವಾಗಿ ಪೌರಕಾರ್ಮಿಕರು ನಡೆಸುವ ಹೋರಾಟವನ್ನು ಬೆಂಬಲಿಸುವುದಾಗಿ ಹೇಳಿದರು.

ನಗರಸಭೆ ಸದಸ್ಯರಾದ ಪವಿತ್ರಾ ಬೋರೇಗೌಡ, ಗೀತಾ, ನಯೀಂ, ರವಿ, ಎಚ್.ಕೆ.ರುದ್ರಪ್ಪ, ಬಿ.ಪಿ.ಪ್ರಕಾಶ್, ಶ್ರೀಧರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.