ADVERTISEMENT

ರಾಜಣ್ಣ ವಿರುದ್ಧ ಬೀದಿಗಿಳಿದ ಜೆಡಿಎಸ್

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 16:19 IST
Last Updated 3 ಜುಲೈ 2022, 16:19 IST
ಎಚ್.ಡಿ.ದೇವೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ವಿರುದ್ಧ ಮಂಡ್ಯ ನಗರದ ಜೆ.ಸಿ.ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇಗೌಡ, ಎಚ್.ಎಸ್.ಮಂಜು, ಡಿ.ರಮೇಶ್, ಎಸ್.ಪಿ.ಗೌರೀಶ್, ಎಚ್.ಎನ್.ಯೋಗೇಶ್ ಇದ್ದಾರೆ
ಎಚ್.ಡಿ.ದೇವೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ವಿರುದ್ಧ ಮಂಡ್ಯ ನಗರದ ಜೆ.ಸಿ.ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇಗೌಡ, ಎಚ್.ಎಸ್.ಮಂಜು, ಡಿ.ರಮೇಶ್, ಎಸ್.ಪಿ.ಗೌರೀಶ್, ಎಚ್.ಎನ್.ಯೋಗೇಶ್ ಇದ್ದಾರೆ   

ಮಂಡ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ತುಮಕೂರಿನ ಕಾಂಗ್ರೆಸ್ ಕೆ.ಎನ್.ರಾಜಣ್ಣ ವಿರುದ್ಧ ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ನಗರದ ಜೆ.ಸಿ.ವೃತ್ತದಲ್ಲಿ ಪ್ರತಿಭಟನೆ ನೆಡೆಸಿದರು.

ನಗರದ ಬೆಂಗಳೂರು- ಮೈಸೂರು ರಸ್ತೆಯ ಸಂಜಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹೆದ್ದಾರಿ ತಡೆದ ನೂರಾರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಎಂ.ಶ್ರೀನಿವಾಸ್ ಮಾತ ನಾಡಿ, ಈ ನಾಡಿನ ಹಿರಿಯ ಮುತ್ಸದ್ಧಿ ರಾಜಕಾರಣಿ ಎಚ್.ಡಿ.ದೇವೇಗೌಡ ಅವರ ಬಗ್ಗೆ ಹಗುರವಾಗಿ ಮಾತನಾ ಡಿರುವ ಕೆ.ಎನ್.ರಾಜಣ್ಣ ಅವರ ನಡೆ ಸರಿಯಲ್ಲ. ಎಚ್.ಡಿ.ದೇವೇಗೌಡ ಅವರ ಸಲಹೆ, ಸಹಕಾರ ದೇಶ ಹಾಗೂ ರಾಜ್ಯದ ಅಭಿವೃದ್ಧಿಗೆ ಅಗತ್ಯವಿದೆ. ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರಾಜಣ್ಣ ರಾಜಕಾರಣದಲ್ಲಿ ಇರಲು ಅನರ್ಹ ಎಂದರು.

ADVERTISEMENT

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಚ್.ಎನ್.ಯೋಗೇಶ್ ಮಾತನಾಡಿ, ಎಚ್.ಡಿ.ದೇವೇಗೌಡ ಅವರು ನಮ್ಮ ರಾಷ್ಟ್ರದ ಆಸ್ತಿ. ಅಂಥವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಕಾವೇರಿ ಹೋರಾಟಗಾರ ದಿ.ಜಿ.ಮಾದೇಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಚಾಟಿಸಿದಂತೆರಾಜಣ್ಣ ಅವರನ್ನೂ ಉಚ್ಚಾಟಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು. ನಂತರ ಪ್ರತಿಭಟನಕಾರನ್ನು ಪೊಲೀಸರು ಮನವೊಲಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ನಗರ ಘಟಕದ ಅಧ್ಯಕ್ಷ ಎಸ್.ಪಿ.ಗೌರೀಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ, ಪಿಇಎಸ್ ಅಧ್ಯಕ್ಷ ಕೆ.ಎಸ್.ವಿಜಯಾನಂದ, ನಗರಸಭೆ ಸದಸ್ಯರಾದ ಮೀನಾಕ್ಷಿ, ಮಂಜುಳಾ, ನಾಗೇಶ್, ಪೂರ್ಣಾನಂದ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಸ್.ಮಹಮ್ಮುದ್, ಮುಖಂಡರಾದ ನಾಗಮ್ಮ, ಜಯಶೀಲಮ್ಮ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.