ADVERTISEMENT

ಮದ್ದೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 2:39 IST
Last Updated 10 ಜುಲೈ 2025, 2:39 IST
ಮೇಕೆದಾಟು ನೀರಾವರಿ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಿ ಕುಡಿಯುವ ನೀರು ಮತ್ತು ಬೇಸಾಯಕ್ಕೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮದ್ದೂರಿನಲ್ಲಿ ಬೆಂಗಳೂರು–ಮೈಸೂರು ಹೆದ್ದಾರಿ ಸಂಚಾರ ತಡೆದು ಬುಧವಾರ ಪ್ರತಿಭಟನೆ ನಡೆಸಲಾಯಿತು 
ಮೇಕೆದಾಟು ನೀರಾವರಿ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಿ ಕುಡಿಯುವ ನೀರು ಮತ್ತು ಬೇಸಾಯಕ್ಕೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮದ್ದೂರಿನಲ್ಲಿ ಬೆಂಗಳೂರು–ಮೈಸೂರು ಹೆದ್ದಾರಿ ಸಂಚಾರ ತಡೆದು ಬುಧವಾರ ಪ್ರತಿಭಟನೆ ನಡೆಸಲಾಯಿತು    

ಮದ್ದೂರು: ಮೇಕೆದಾಟು ನೀರಾವರಿ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಿ ಕುಡಿಯುವ ನೀರು ಮತ್ತು ಬೇಸಾಯಕ್ಕೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪಟ್ಟಣದಲ್ಲಿ ಬೆಂಗಳೂರು–ಮೈಸೂರು ಹೆದ್ದಾರಿ ಸಂಚಾರ ತಡೆದು ಬುಧವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದ ಬಳಿಯಿರುವ ಬೆಂಗಳೂರು–ಮೈಸೂರು ಹೆದ್ದಾರಿಗೆ ಆಗಮಿಸಿದ ವೇದಿಕೆ ಕಾರ್ಯತರು ಹಾಗೂ ರೈತ ಸಂಘದ ಮುಖಂಡರು ಮೇಕೆದಾಟು ಯೋಜನೆ ಪ್ರಾರಂಭಿಸಲು ಮಿನಾಮೇಷ ಎಣಿಸುತ್ತಿರುವ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಕೆಲಕಾಲ ಹೆದ್ದಾರಿ ಸಂಚಾರ ತಡೆದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ.ಉಮಾಂಶಕರ್ ಮಾತನಾಡಿ, ‘ಮೇಕೆದಾಟು ಯೋಜನೆ ಜಾರಿ ಮಾಡದ ಕಾರಣ ಕೆ.ಆರ್.ಎಸ್ ನಿಂದ ಹೊರ ಬರುವ ಸಾವಿರಾರು ಪ್ರಮಾಣದ ಕ್ಯೂಸೆಕ್‌ ನೀರು ವ್ಯರ್ಥವಾಗಿ ಹರಿದುಕೊಂಡು ತಮಿಳುನಾಡಿಗೆ ಹರಿದು ಹೋಗುತ್ತಿದ್ದರೂ ಜನಪ್ರತಿನಿಧಿಗಳು ಗಮನಹರಿಸದಿರುವುದು ವಿಪರ್ಯಾಸ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಯೋಜನೆ ಪೂರ್ಣಗೊಳಿಸಿದರೆ ಸುಮಾರು 10 ಜಿಲ್ಲೆಯ ರೈತರಿಗೆ ಬೇಸಾಯಕ್ಕೆ ಹಾಗೂ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ ಇದನ್ನರಿತು ಸರ್ಕಾರಗಳು ಯೋಜನೆ ಜಾರಿಗೆ ತರಲು ಮುಂದಾಗಬೇಕು. ಕೇಂದ್ರ ಸರ್ಕಾರ ಕೂಡ ಮಧ್ಯಸ್ಥಿಕೆ ವಹಿಸಿಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವೇದಿಕೆ ವತಿಯಿಂದ ರಾಜ್ಯವ್ಯಾಪಿ ಉಗ್ರ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಸ್.ಪ್ರಭುಲಿಂಗು, ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ವೆಂಕಟೇಶ್, ಸೊ.ಸಿ.ಪ್ರಕಾಶ್, ಸೊಂಪುರ ಉಮೇಶ್, ನಾಗರಾಜು, ಚಿಕ್ಕಣ್ಣ, ವೀರಪ್ಪ, ಗಣೇಶ, ವಿಜೇಂದ್ರಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.