ಶ್ರೀರಂಗಪಟ್ಟಣ: ಕಾಶ್ಮೀರದಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ, ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಗ್ರಾಮದ ಬಿಸಿಲು ಮಾರಮ್ಮ ದೇವಾಲಯದಿಂದ ನಾಡ ಕಚೇರಿವರೆಗೆ ಸರ್ವೋದಯ ಅಲೆಯನ್ಸ್ ಸಂಸ್ಥೆ, ಕಸಾಪ ಅರಕೆರೆ ಹೋಬಳಿ ಘಟಕ, ಅಸೋಸಿಯೇಷನ್ ಆಫ್ ಅಲಯನ್ಸ್ ಇಂಟರ್‌ನ್ಯಾಷನಲ್ ಕ್ಲಬ್ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜು ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ನಾಡ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ನಡೆಸಿ ಉಗ್ರರು ಮತ್ತು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದರು.
‘ಭಯೋತ್ಪಾದಕ ಕೃತ್ಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ಕಡಿವಾಣ ಹಾಕಬೇಕು. ಉಗ್ರರಿಗೆ ಬೆಂಬಲ ನೀಡುವ ಪಾಕಿಸ್ತಾನ ಮತ್ತು ಸ್ಥಳೀಯರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅಲಯನ್ಸ್ ಕ್ಲಬ್ ವಲಯಾಧ್ಯಕ್ಷ ಎ.ಆರ್. ಅನಿಲ್‌ಬಾಬು ಆಗ್ರಹಿಸಿದರು.
ಕಸಾಪ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎ. ಸೋಮಶೇಖರ್, ಹೋಬಳಿ ಘಟಕದ ಅಧ್ಯಕ್ಷ ರಾಮಕೃಷ್ಣ, ಕರ್ನಾಟಕ ರಾಷ್ಟ್ರ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಸ್. ನಾಗೇಂದ್ರ, ನಿವೃತ್ತ ಶಿಕ್ಷಕ ಎ.ಎಚ್. ಚನ್ನೇಗೌಡ, ಮುಖಂಡರಾದ ಎ.ಎಂ. ಜಗದೀಶ್, ಕುಮಾರ್, ಎ.ಎಂ. ನಟರಾಜ್, ಶಿವರಾಜು, ಗೌತಮ್, ಎ.ಆರ್. ರಜತ್, ಎ.ಎಸ್. ಕಿಶೋರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಾಡ ಕಚೇರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.