ADVERTISEMENT

ಮಂಡ್ಯ ಬಂದ್‌ ನಾಳೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 13:25 IST
Last Updated 28 ಜುಲೈ 2020, 13:25 IST

ಮಂಡ್ಯ: ಕೆಆರ್‌ಎಸ್‌ ಜಲಾಶಯದ ಆಸುಪಾಸಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ವಿರೋಧಿಸಿ ‘ಕಾವೇರಿ-ಕೆಆರ್‌ಎಸ್‌ ಉಳಿವಿಗಾಗಿ ಜನಾಂದೋಲನ ಸಮಿತಿ’ ಬುಧವಾರ ಮಂಡ್ಯ ಬಂದ್‌ಗೆ ಕರೆ ಕೊಟ್ಟಿದೆ.

ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯಕ್ಕೆ ಧಕ್ಕೆ ಉಂಟಾಗಲಿದೆ. 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕು ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ 2018ರಲ್ಲೇ ವರದಿ ನೀಡಿದೆ. ಜಿಲ್ಲಾಡಳಿತ ಗಣಿಗಾರಿಕೆಯನ್ನು ನಿಷೇಧಿಸಿದ್ದರೂ ರಾತ್ರಿಯ ವೇಳೆಯಲ್ಲಿ ಗಣಿ ಚಟುವಟಿಕೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ‘ಕಾವೇರಿ– ಕೆಆರ್‌ಎಸ್‌ ಉಳಿಸಿ’ ಘೋಷಣೆಯಡಿ ಬಂದ್‌ ಆಚರಣೆ ಮಾಡಲಾಗುತ್ತಿದೆ.

‘ಇಡೀ ದಿನ ಸಾಂಕೇತಿಕವಾಗಿ ಬಂದ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ವರ್ತಕರು ಒಪ್ಪಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ನೀಡಿದ್ದಾರೆ’ ಎಂದು ಸಮಿತಿ ಅಧ್ಯಕ್ಷ ಜಿ.ಟಿ.ವೀರಪ್ಪ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.