ADVERTISEMENT

ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 2:07 IST
Last Updated 26 ಸೆಪ್ಟೆಂಬರ್ 2020, 2:07 IST
ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು
ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು   

ಮಂಡ್ಯ: ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಬಾರದೆಂದು ರೈತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೂ ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಖಾಸಗಿ ಕಂಪನಿ ಹಾಗೂ ಶ್ರೀಮಂತರಿಗೆ ಅನುಕೂಲವಾಗುವಂತಹ ಯೋಜನೆಗೆ ಹೆಚ್ಚಿನ ಮಹತ್ವ ನೀಡುತ್ತಿರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆತಡೆಯಿಂದಾಗಿ ಅರ್ಧಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮುಖಂಡರಾದ ಇ.ಎನ್.ಕೃಷ್ಣ, ಹೆಮ್ಮಿಗೆ ಚಂದ್ರಶೇಖರ್, ಮಂಜು, ನಾರಾಯಣ್, ರಾಜೇಶ್, ಕರಿಗೌಡ, ಕೆಂಪೇಗೌಡ, ರಮೇಶ್ ಸೇರಿದಂತೆ ಮತ್ತಿತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.