ಪಾಂಡವಪುರ: ನಟ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನವನ್ನು ಪಟ್ಟಣದಲ್ಲಿ ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು.
ಹಳೆ ಬಸ್ ನಿಲ್ದಾಣದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಳಿಕ ಅನ್ನಸಂತರ್ಪಣೆ ಮಾಡಿದರು.
ಪುನೀತ್ ರಾಜ್‌ಕುಮಾರ್ ಅಭಿಮಾನಿ ಚಂದ್ರಕಾಂತ್ ಮಾತನಾಡಿ, ‘ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದ ದೊಡ್ಡ ಮನೆಯ ಪುನೀತ್ ರಾಜ್‌ಕುಮಾರ್ ಎಂದಿಗೂ ಬೀಗಲಿಲ್ಲ. ಸಮಾಜಕ್ಕೆ ಮಾದರಿಯಾಗಿ ಬದುಕಿದ್ದರು. ನೂರಾರು ಸಮಾಜಮುಖಿ ಕೆಲಸಗಳನ್ನು ಮಾಡಿದ್ದರು. ಅವರ ಈ ಸೇವೆಯೂ ನಮ್ಮೆಲ್ಲರಿಗೂ ಮಾದರಿಯಾಗಬೇಕಿದೆ’ ಎಂದರು.
ಸುಧಾ ಜಯರಾಮ್, ಶಿವಕುಮಾರ್, ಪರಮೇಶ್, ಉಮೇಶ್, ಉಪೇಂದ್ರ, ಚಂದ್ರೇಶ್, ರವಿ, ಕಿರಣ್, ರಾಜೇಶ್, ಗಣೇಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.